ಹೈಲೈಟ್ಸ್‌:

  • ಕರಾವಳಿ, ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ
  • ಉತ್ತರ ಕರ್ನಾಟಕ ಭಾಗದಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
  • ರಾಜಧಾನಿ ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಜೂನ್ 13 ರಿಂದ 17 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ‘ಆರೆಂಜ್‌ ಆಲರ್ಟ್‌’ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲೂ ವ್ಯಾಪಕ ಮಳೆಯಾಗುವ ಸಂಭವವಿದ್ದು, ಇಲಾಖೆ ಆರೆಂಜ್‌ ಆಲರ್ಟ್‌ ಘೋಷಿಸಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಮತ್ತು ಗದಗದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂನ್ 13 ರಿಂದ 17 ರವರೆಗೆ ಯಲ್ಲೋ ಆಲರ್ಟ್‌ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಬೇಸಿಗೆ ಮಳೆಗೆ ತಂಪಾಯ್ತು ಇಳೆ.. ರಾಜಧಾನಿ ಬೆಂಗಳೂರು ಈಗ ಕೂಲ್‌ ಕೂಲ್..!
ಎಲ್ಲೆಲ್ಲಿಎಷ್ಟು ಮಳೆ?: ಭಾನುವಾರ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನ ಬಹುತೇಕ ಎಲ್ಲಾ ಕಡೆ ಮಳೆಯಾಗಿದೆ.

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ, ಹೊಳೆಯಂತಾದ ರಸ್ತೆಗಳು; ಇನ್ನೂ ಎರಡು ದಿನ ಮಳೆ
ಮುಖ್ಯವಾಗಿ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ 12 ಸೆ.ಮೀ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 10 ಸೆ.ಮೀ, ಭಟ್ಕಳದಲ್ಲಿ 9 ಸೆ.ಮೀ, ಕಾರವಾರ 8 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 10 ಸೆ.ಮೀ. ಹಾಗೂ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 9 ಸೆ.ಮೀ. ಮಳೆಯಾಗಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ವೀಕೆಂಡ್ ಕರ್ಫ್ಯೂಗೆ ಮುನ್ನವೇ ಬೆಂಗಳೂರನ್ನು ಲಾಕ್‌ಡೌನ್‌ ಮಾಡಿದ ಭರ್ಜರಿ ಮಳೆ, ಬಿರುಗಾಳಿ!Source link

Leave a Reply

Your email address will not be published.