ಹೈಲೈಟ್ಸ್‌:

  • ಸಿದ್ದರಾಮಯ್ಯ ಜೊತೆ ಚರ್ಚಿಸಿದ ವಿಷಯಗಳನ್ನು ಬಹಿರಂಗ ಮಾಡಲ್ಲ
  • ನಾವೂ ಚುನಾವಣೆಗೆ ಸಿದ್ದರಿದ್ದೇವೆ, ನಮ್ಮ ಕೆಲಸ ನಾವು ಮಾಡ್ತಿದ್ದೇವೆ
  • ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ತಂಡ ಕಳಿಸ್ತೇವೆ: ಡಿಕೆಶಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇತ್ತೀಚಿನ ಕೆಲ ಮಹತ್ತರ ಬೆಳವಣಿಗೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ ಕೆಲ ಹೊತ್ತು ಮಾತುಕತೆ ನಡೆಸಿದ ಬಳಿಕ ಪ್ರತಿಕ್ರಿಯಿಸಿದ ಶಿವಕುಮಾರ್‌, ‘ನಾನು ಹಾಗೂ ಸಿದ್ದರಾಮಯ್ಯನವರು ಚರ್ಚಿಸಿದ ವಿಚಾರವನ್ನು ಬಹಿರಂಗಪಡಿಸಲಾಗದು. ನಾವೂ ಚುನಾವಣೆಗೆ ಸಿದ್ಧರಿದ್ದು, ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಂಡಗಳನ್ನು ಕಳುಹಿಸಲಾಗಿದ್ದು, ವಹಿಸಿರುವ ಕೆಲಸವನ್ನು ತಂಡಗಳು ಮಾಡುತ್ತಿವೆ’ ಎಂದು ಹೇಳಿದರು.

‘ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಚುನಾವಣೆಯಲ್ಲಿ ಪರಾಭವಗೊಂಡವರು, ಮಾಜಿ ಜನಪ್ರತಿನಿಧಿಗಳೊಂದಿಗೆ ಏಳು ದಿನಗಳ ಕಾಲ ಮಾತನಾಡಿದ್ದಾರೆ. ಕೋವಿಡ್‌ ಹಿನ್ನೆಲೆಯಲ್ಲಿ ಬಸವ ಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣ ತಿಳಿಯಲು ತಂಡ ಕಳುಹಿಸುವುದನ್ನು ಮುಂದೂಡಲಾಗಿದೆ’ ಎಂದು ಪ್ರತಿಕ್ರಿಯಿಸಿದರು.

ಪೆಟ್ರೋಲ್ ದರ ಏರಿಕೆ ಮೂಲಕ ಕೇಂದ್ರ ಸರ್ಕಾರದಿಂದ ಜನರ ಪಿಕ್‌ ಪಾಕೆಟ್, ಡಿಕೆಶಿ ಆಕ್ರೋಶ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಠಗಳಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಅವರ ಪಕ್ಷದವರು ಎಲ್ಲಿಗೆ ಬೇಕಾದರೂ ಹೋಗಲಿ. ಯಾರಿಗೆ ಬೇಕಾದರೂ ಪಾದ ಪೂಜೆ ಮಾಡಲಿ. ನಾವು ಹೋದಾಗ ನಮಗೂ ಆಶೀರ್ವಾದ ಮಾಡುತ್ತಾರೆ’ ಎಂದು ಮಾರ್ಮಿಕವಾಗಿ ನುಡಿದರು.

ಬಿಜೆಪಿಯಲ್ಲಿ ಚರ್ಚೆಯಾಗುತ್ತಿರುವ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಊಹಾಪೋಹದ ಬಗ್ಗೆ ಕಾಯುತ್ತಾ ಕೂರಲು ಸಾಧ್ಯವಿಲ್ಲ. ಜನರ ಹೃದಯ ಗೆಲ್ಲಲು ಹೊರಟಿದ್ದೇವೆ. ಚುನಾವಣೆ ಗೆಲ್ಲಲು ನಾವು ಸಿದ್ಧ’ ಎಂದು ಹೇಳಿದರು.

ಪೆಟ್ರೋಲ್, ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದೇ ಅತಿದೊಡ್ಡ ಪ್ಯಾಕೇಜ್! ಡಿಕೆಶಿ
ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಜಮೀರ್‌ ಅಹಮ್ಮದ್‌ ಖಾನ್‌ ನೀಡಿರುವ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ ಡಿಕೆಶಿ, ಪಕ್ಷದ ಶಾಸಕರು, ನಾಯಕರು, ಕಾರ್ಯಕರ್ತರು ಮತ್ತೊಬ್ಬರ ಬಗ್ಗೆ ಟೀಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ವೈಯಕ್ತಿಕ ವಿಚಾರಗಳನ್ನು ಪ್ರಸ್ತಾಪಿಸಬಾರದು. ಜಾತಿ, ಧರ್ಮ ಸೇರಿದಂತೆ ಯಾವುದೇ ಭಾವನೆಗಳಿಗೆ ಧಕ್ಕೆ ತರಬಾರದು. ಮುಂದೆ ಇಂತಹ ಟೀಕೆ, ಹೇಳಿಕೆ ನೀಡುವ ಮೊದಲು ಜಮೀರ್‌ ಅಹಮ್ಮದ್‌ ಅವರು ತಾವು ಒಂದು ಪಕ್ಷದ ಪ್ರತಿನಿಧಿ ಎಂಬುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಸಂಕಷ್ಟದ ಸಮಯದಲ್ಲಿ ಚುನಾವಣೆ ಗೆಲುವಿನ ಸಂಭ್ರಮಾಚರಣೆ ಬೇಡ: ಡಿಕೆಶಿ ಮನವಿSource link

Leave a Reply

Your email address will not be published.