Back To Top

 ಪೀಣ್ಯ ಮೆಟ್ರೋ ಸ್ಟೇಷನ್‌ ಸ್ಥಳ ಬದಲಾವಣೆ: BMRCL ಏನು ಹೇಳಿದೆ
February 9, 2025

ಪೀಣ್ಯ ಮೆಟ್ರೋ ಸ್ಟೇಷನ್‌ ಸ್ಥಳ ಬದಲಾವಣೆ: BMRCL ಏನು ಹೇಳಿದೆ

ಬೆಂಗಳೂರು: ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಪೀಣ್ಯದಲ್ಲಿರುವ ಯೋಜಿತ ಮೆಟ್ರೋ ನಿಲ್ದಾಣವನ್ನು ಸ್ಥಳಾಂತರಿಸುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
3 ನೇ ಹಂತದ ವಿವರವಾದ ಯೋಜನಾ ವರದಿ (DPR) ನ್ನು ರಾಜ್ಯ ಸರ್ಕಾರ ಈಗಾಗಲೇ ಅನುಮೋದಿಸಿದೆ. ಆರೆಂಜ್ ಲೈನ್ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಎರಡನೇ ಕಾರಿಡಾರ್ 12.5 ಕಿಮೀ ಸೇರಿ 3ನೇ ಹಂತ ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ. ಮೆಟ್ರೋ ಯೋಜನೆಯ 3 ನೇ ಹಂತದ ಭಾಗವಾಗಿದ್ದು, ಜೆ.ಪಿ. ನಗರ ಹಂತ 4 ರಿಂದ ಕೆಂಪಾಪುರ 32.15 ಕಿಮೀ ವರೆಗಿನ ಆರೆಂಜ್ ಲೈನ್ ನ್ನು 300 ಮೀಟರ್‌ಗಳಷ್ಟು ಕಡಿಮೆ ಮಾಡುವ ಉದ್ದೇಶದಿಂದ ಪೀಣ್ಯ ಮೆಟ್ರೋ ನಿಲ್ದಾಣವನ್ನು ಸ್ಥಳಾಂತರ ಮಾಡುವ ಕ್ರಮವನ್ನು ಬಿಎಂಆರ್ ಸಿಎಲ್ ಪರಿಗಣಿಸುತ್ತಿರುವುದಾಗಿ ಹೇಳಿದೆ.
ಹಿಂದಿನ ಯೋಜನೆಯ ಪ್ರಕಾರ ಜೆ.ಪಿ. ನಗರ, ಮೈಸೂರು ರಸ್ತೆ, ಸುಮನಹಳ್ಳಿ ಮತ್ತು ಪೀಣ್ಯದಲ್ಲಿ ಇಂಟರ್ಚೇಂಜ್ ನಿಲ್ದಾಣಗಳನ್ನು ಯೋಜಿಸಲಾಗಿತ್ತು. ಆದರೆ ಪೀಣ್ಯ ಮೆಟ್ರೋ ನಿಲ್ದಾಣದ ಸ್ಥಳದಲ್ಲಿ ಇಂಟರ್ಚೇಂಜ್ ವ್ಯವಸ್ಥೆ ನಿರ್ಮಾಣಕ್ಕೆ ಅತಿ ಹೆಚ್ಚಿನ ಎತ್ತರದ ಸ್ಥಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂಟರ್ಚೇಂಜ್ ನಿಲ್ದಾಣದ ಬಗ್ಗೆ ಮರು ಮೌಲ್ಯಮಾಪನ ನಡೆಯುತ್ತಿದೆ.
ಹೊಸ ನಿಲ್ದಾಣವನ್ನು ಪೀಣ್ಯ ಮತ್ತು ಗುರುಗುಂಟೆಪಾಳ್ಯದಲ್ಲಿರುವ ಅಸ್ತಿತ್ವದಲ್ಲಿರುವ ಮೆಟ್ರೋ ನಿಲ್ದಾಣಗಳಿಗೆ ಎರಡು ಪ್ರತ್ಯೇಕ ಪಾದಚಾರಿ ಮೇಲ್ಸೇತುವೆಗಳ ಮೂಲಕ ಸಂಪರ್ಕಿಸಲಾಗುವುದು. ಮೆಟ್ರೋ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗುರುವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಬಿಎಂಆರ್‌ಸಿಎಲ್ ಅಧಿಕಾರಿಗಳು ವಿವರಿಸಿದ್ದಾರೆ.
ಮೆಟ್ರೋ ದರ ಹೆಚ್ಚಳವನ್ನು ಉದ್ದೇಶಿಸಿ ಮಾತನಾಡಿ, ಈ ಉದ್ದೇಶಕ್ಕಾಗಿ ನ್ಯಾಯಾಧೀಶರ ನೇತೃತ್ವದಲ್ಲಿ ಕೇಂದ್ರ ಸಮಿತಿಯನ್ನು ರಚಿಸಲಾಗಿದೆ ಮತ್ತು ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಪ್ರಯತ್ನಗಳ ಕುರಿತು, ಹೊಸದಾಗಿ ನಿರ್ಮಿಸಲಾದ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್‌ಗಳನ್ನು ನಿರ್ಮಿಸುವ ಯೋಜನೆಯನ್ನು ಶಿವಕುಮಾರ್ ಬಹಿರಂಗಪಡಿಸಿದರು. ನಗರ ಸೌಂದರ್ಯೀಕರಣ ಪ್ರಯತ್ನಗಳ ಭಾಗವಾಗಿ ಹೊಸ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್‌ಗಳ ನಿರ್ಮಾಣ ಸೇರಿದಂತೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಕ್ರಮ ಜಾರಿಗೆ ತರಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪೀಣ್ಯ ಮೆಟ್ರೋ ನಿಲ್ದಾಣವನ್ನು ಹೊರ ವರ್ತುಲ ರಸ್ತೆಯ ಗುರುಗುಂಟೆಪಾಳ್ಯ ಸಿಗ್ನಲ್ ಬಳಿಯ ಸ್ಥಳಕ್ಕೆ ಸ್ಥಳಾಂತರಿಸುವ ಬಗ್ಗೆ ಯೋಚನೆ ನಡೆಸಲಾಗುತ್ತಿದೆ ಎಂದು ಬಿಎಂಆರ್ ಸಿಎಲ್ ಹೇಳಿದೆ.

Prev Post

ದೀಪನಾಥೇಶ್ವರ ದೇವಾಲಯದಲ್ಲಿ ಆರಿದ ದೀಪ: ರಾಜ್ಯ ಆಳುವವರಿಗೆ ತೊಂದರೆ ಆತಂಕ

Next Post

ಮಗನ ಮದುವೆ: ಹತ್ತು ಸಾವಿರ ಕೋಟಿ ರೂ. ದಾನ ಮಾಡಿದ ಗೌತಮ್‌ ಅʼದಾನಿʼ

post-bars

Leave a Comment

Related post