ಐಸಿಸಿ ಚಾಂಪಿಯನ್ಸ್ ಟ್ರೋಫಿ: ಟೀಂ ಇಂಡಿಯಾ ಅಮೋಘ ಗೆಲುವು
2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ.
ನವದೆಹಲಿ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2025 ರ ಚಾಂಪಿಯನ್ಸ್ ಟ್ರೋಫಿ (icc champions trophy 2025) ಫೈನಲ್ ಪಂದ್ಯ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಿತು. ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ತೀರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಬಲಿಷ್ಠ ಕಿವೀಸ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿದ ರೋಹಿತ್ ಪಡೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 7 ವಿಕೆಟ್‌ಗಳನ್ನು ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸುಲಭವಾಗಿ ಗೆಲುವಿನ ದಡ ಮುಟ್ಟಿತು.

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ನ್ಯೂಜಿಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಚ್ಚರಿ ಏನೆಂದರೆ ನಾಯಕ ರೋಹಿತ್ ಶರ್ಮಾ ಈ ಟೂರ್ನಿಯ ಒಂದು ಪಂದ್ಯದಲ್ಲೂ ಟಾಸ್ ಗೆದ್ದಿಲ್ಲ. ಇದು ಭಾರತ ತಂಡದ ಸತತ 15ನೇ ಟಾಸ್ ಸೋಲು.
ಈ ಪೈಕಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಸೋತಿರುವುದು 12 ಸಲ. ಇದರೊಂದಿಗೆ ಸತತವಾಗಿ ಅತಿ ಹೆಚ್ಚು ಟಾಸ್ ಸೋತ ವಿಶ್ವದ ಮೊದಲ ತಂಡ ಎಂಬ ಕೆಟ್ಟ ದಾಖಲೆಗೆ ಭಾರತ ಪಾತ್ರವಾಗಿದೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಫೈನಲ್ನಲ್ಲಿ ಭಾರತ ತಂಡವು ಚೇಸ್ ಮಾಡಲಿದೆ. ನ್ಯೂಜಿಲೆಂಡ್ ತಂಡದಲ್ಲಿ ಮಹತ್ವದ ಒಂದು ಬದಲಾವಣೆ ಕಂಡಿದೆ. ತಮ್ಮ ಪ್ರಮುಖ ವೇಗಿಯಾಗಿದ್ದ ಮ್ಯಾಟ್ ಹೆನ್ರಿ ಅವರು ಗಾಯದಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ನಾಥನ್ ಸ್ಮಿತ್ ಬಂದಿದ್ದಾರೆ. ಆದರೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಪ್ರಶಸ್ತಿ ಸುತ್ತಿನಲ್ಲೂ ಕಣಕ್ಕಿಳಿಯಲಿದೆ.

ನ್ಯೂಜಿಲೆಂಡ್ ತಂಡದಲ್ಲಿ
ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್, ನಾಥನ್ ಸ್ಮಿತ್
ಭಾರತ ತಂಡದಲ್ಲಿ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.
ಇದನ್ನು ಓದಿ: