ವೃದ್ಧ ಪೋಷಕರನ್ನು ಹೊರಗಟ್ಟಿದರೆ ಆಸ್ತಿ ಭಾಗ್ಯ ರದ್ದು!!!
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ ವಿಲ್ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ̤
ಬೆಂಗಳೂರು: ಹೆತ್ತ ತಂದೆ-ತಾಯಿಯರನ್ನು ಅನಾಥರನ್ನಾಗಿ ಮಾಡುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ವೃದ್ಧರಿಗೆ ಹಿಂಸೆ ನೀಡುವುದಲ್ಲದೇ ಹೊರಗಟ್ಟುವ ಅಮಾನವೀಯ ಕೃತ್ಯಗಳನ್ನು ತಡೆಗಟ್ಟಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ.
ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ.
ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ ವಿಲ್ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ
ಕಳೆದ ಒಂದು ವಾರದಿಂದ ವಿಕಾಸ ಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಇತರ ಸದಸ್ಯರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಕುರಿತು ಕಳವಳ ವ್ಯಕ್ತಪಡಿಸಿದ ಸಚಿವರು, ಈ ಕುರಿತ ಪ್ರಕರಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು (ಡಿಎಂಇ) ಕೂಡಲೇ ಸಹಾಯಕ ಆಯುಕ್ತರಿಗೆ (ಕಂದಾಯ ಉಪವಿಭಾಗ) ದೂರುಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು.
ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಪರಿತ್ಯಕ್ತ ಪೋಷಕರಿಗೆ ಸಚಿವರು ಕರೆ ನೀಡಿದರು.
ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ದೂರುಗಳನ್ನು ಸಲ್ಲಿಸಬೇಕು ಎಂದು ಡಾ. ಪಾಟೀಲ್ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನು ಓದಿ: