Back To Top

 ಅಪ್ರಾಪ್ತೆ ಬಾಲಕಿ ಮೇಲೆ ಬ್ಯಾಡ್ಮಿಂಟನ್ ತರಬೇತುದಾರ ಅತ್ಯಾಚಾರ
April 7, 2025

ಅಪ್ರಾಪ್ತೆ ಬಾಲಕಿ ಮೇಲೆ ಬ್ಯಾಡ್ಮಿಂಟನ್ ತರಬೇತುದಾರ ಅತ್ಯಾಚಾರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಡ್ಮಿಂಟನ್ ತರಬೇತುದಾರ (badminton Coach) ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಡ್ಮಿಂಟನ್ ತರಬೇತುದಾರ (badminton Coach) ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡು ಮೂಲದ ಸುರೇಶ್ ಬಾಲಾಜಿ (26) ಬ್ಯಾಡ್ಮಿಂಟನ್ ಕೋಚ್ ಆಗಿದ್ದು, ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರನ್ನು ಕೋಚ್‌ ಲೈಂಗಿಕವಾಗಿ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್ ಸೇರಿದ್ದ ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಯಾರ ಬಳಿಯೂ ಬಾಯಿ ಬಿಡದಂತೆ ಬಾಲಕಿಗೆ ಹೇಳಿದ್ದ.

ಹೀಗೆ ಒಂದು ದಿನ ಬಾಲಕಿ ರಜೆಗೆ ಅಜ್ಜಿಯ ಮನೆಗೆ ಬಂದಾಗ ಮೊಬೈಲ್ ನಿಂದ ತನ್ನ ನಗ್ನ ಪೋಟೋವನ್ನು ಸುರೇಶ್ಗೆ ಶೇರ್ ಮಾಡಿದ್ದಾಳೆ. ಬಳಿಕ ಮೊಬೈಲ್ ನೋಡಿದಾಗ ಕೋಚ್ಗೆ ನಗ್ನ ಫೋಟೋ ಕಳುಹಿಸಿರುವುದು ಪತ್ತೆಯಾಗಿದೆ. ಇದನ್ನು ನೋಡಿ ಅಜ್ಜಿ ಶಾಕ್ ಆಗಿದ್ದಾಳೆ. ಬಾಲಕಿ ತನ್ನ ನಗ್ನ ಫೋಟೋವನ್ನು ಕೋಚ್ಗೆ ಕಳುಹಿಸಿರುವುದನ್ನು ಕಂಡು ಬೆಚ್ಚಿಬಿದ್ದಿರುವ ಅಜ್ಜಿ ಕೂಡಲೇ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಆಗ ಬಾಲಕಿಯನ್ನ ವಿಚಾರಿಸಿದಾಗ ಕೋಚ್ ಸುರೇಶನ ಕಾಮದಾಟ ಬಟಾಬಯಲಾಗಿದೆ.
ಬಳಿಕ ಪೋಷಕರು ಕೋಚ್ ಸುರೇಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.
ಇದೇ ವೇಳೆ ಆರೋಪಿ ಮೊಬೈಲ್ ಪರಿಶೀಲನೆ ಮಾಡಿದಾಗ ಕ್ರೀಡಾ ತರಬೇತಿ ಕೇಂದ್ರದಲ್ಲಿ ಹಲವು ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿರುವುದು ಕಂಡುಬಂದಿದೆ. ಅಲ್ಲದೇ ಮೊಬೈಲಿನಲ್ಲಿ 13 ರಿಂದ 16 ವರ್ಷ ವಯಸ್ಸಿನ 8 ಹುಡುಗಿಯರ ನಗ್ನ ಫೋಟೋಗಳು ಮತ್ತು ವೀಡಿಯೊಗಳು ಸಹ ಪತ್ತೆಯಾಗಿವೆ. ಹೀಗಾಗಿ ತನಿಖೆ ನಡೆಸಲು ಪೊಲೀಸರು, ಆರೋಪಿ ಸುರೇಶ್ ಬಾಲಾಜಿ ಕೋರ್ಟ್ ಮೂಲಕ ಎಂಟು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಬ್ಯಾಡ್ಮಿಂಟನ್ ಕೋಚಿಂಗ್ ಬರುತ್ತಿದ್ದ ಬಾಲಕಿಯರೊಂದಿಗೆ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಇದನ್ನು ಯಾರಿಗೂ ಹೇಳದಂತೆ ಹೆದರಿಸಿದ್ದ. ಹೀಗಾಗಿ ಇದುವರೆಗೂ ಬಾಲಕಿಯರು ಬಾಯ್ಬಿಟ್ಟಿಲ್ಲ. ಆದ್ರೆ, ಓರ್ವ ಬಾಲಕಿ ಅಜ್ಜಿ ಮೊಬೈಲ್ನಿಂದ ತನ್ನ ನಗ್ನ ಫೋಟೋವನ್ನು ಕಳುಹಿಸಿದಾಗ ಕೋಚರ್ ಸುರೇಶನ ನವರಂಗಿ ಆಟ ಬಯಲಿಗೆ ಬಿದ್ದಿದ್ದು, ಬಳಿಕ ಇನ್ನುಳಿದ ಬೇರೆ ಬಾಲಕಿಯರ ಮೇಲೆ ಲೈಂಗಿಕದ ದೌರ್ಜನ್ಯ ಎಸಗಿರುವುದು ಗೊತ್ತಾಗಿದೆ. ಹೀಗಾಗಿ ಪೊಲೀಸರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತೆ ಬಾಲಕಿಯರ ಹೇಳಿಕೆ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ:

https://infomindz.in/muttina-bale-beesida-shikshaki/
Prev Post

ಮೇ 29 ರಿಂದ ಶಾಲೆಗಳು ಪುನರಾರಂಭ

Next Post

ಸ್ಟಾರ್ಟ್ ಅಪ್ ಕಂಪನಿಯಿಂದ ಪ್ರೇಮಿಗಳ ಏಕಾಂತಕ್ಕೆ ಹೊಸ ಸ್ಮೂಚ್ ಕ್ಯಾಬ್ ವ್ಯವಸ್ಥೆ ಆರಂಭ

post-bars

Leave a Comment

Related post