Back To Top

 ಮನೆಗೆ ನುಗ್ಗಿ ಬಾಲಕಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ

ಮನೆಗೆ ನುಗ್ಗಿ ಬಾಲಕಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ

ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅತಿಥಿ ಶಿಕ್ಷಕನನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತ ಶಿಕ್ಷಕನನ್ನು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿವರಾಜ ಹಣಮಂತ (32) ಎಂದು ಗುರುತಿಸಲಾಗಿದೆ.

ಕಲಬುರಗಿ: ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅತಿಥಿ ಶಿಕ್ಷಕನನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತ ಶಿಕ್ಷಕನನ್ನು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿವರಾಜ ಹಣಮಂತ (32) ಎಂದು ಗುರುತಿಸಲಾಗಿದೆ.
8ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ. ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ಪೋಷಕರು ಯುಗಾದಿ ಹಬ್ಬಕ್ಕೆಂದು ತಮ್ಮ ತವರು ಮನೆಗೆ ಹೋಗಿದ್ದಾರೆ. ಪರೀಕ್ಷೆಯ ಹಿನ್ನೆಲೆ ಸಂತ್ರಸ್ತೆ ಬಾಲಕಿ ಮನೆಯಲ್ಲಿಯೇ ಉಳಿದಿದ್ದಳು.
ಅದೇ ಗ್ರಾಮದಲ್ಲಿನ ಅಜ್ಜಿಯ ಮನೆಗೆ ಹೋಗಿದ್ದ ಬಾಲಕಿ, ಸಂಜೆ ವಾಪಸ್ ಬಂದು ಮನೆಯಲ್ಲಿ ಸ್ನೇಹಿತರ ಜತೆಗೆ ಟಿ.ವಿ. ನೋಡುತ್ತಿದ್ದಳು. ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಶಿವರಾಜ, ಮನೆಗೆ ನುಗ್ಗಿದನು. ಇದರಿಂದ ಬಾಲಕಿಯ ಸ್ನೇಹಿತರು ಹೆದರಿ ಹೊರಗೆ ಓಡಿಹೋದರು ಎಂದು ಹೇಳಿದ್ದಾರೆ.
ಈ ವೇಳೆ ಬಾಲಕಿ ಆರೋಪಿಯಲ್ಲಿ ಮನೆಯಲ್ಲಿ ತಂದೆ ತಾಯಿ ಇಲ್ಲದ ವೇಳೆ ಯಾಕೆ ಬಂದಿದ್ದು ಎಂದು ಕೇಳಿದ್ದಾಳೆ. ನಾನು ನಿನ್ನ ಪ್ರೀತಿಸುತ್ತೇನೆ ಎಂದು ಪುಸುಲಾಯಿಸಿ ಮತ್ತು ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದನು. ಪ್ರಜ್ಞೆ ತಪ್ಪಿ ಬಿದ್ದಿದ್ದ ಬಾಲಕಿಯನ್ನು ಪೋಷಕರು ಕಲಬುರಗಿ ನಗರದ ಜಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಎಚ್ಚರವಾದಾಗ ನಡೆದ ಕೃತ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.

Prev Post

ಹೆಚ್ಚಾದ ಐಪಿಎಲ್ ಬೆಟ್ಟಿಂಗ್ : ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಗಳಿಗೆ ಸೈಬರ್ ಕ್ರೈಂ…

Next Post

ಮಹಿಳೆಯರೊಂದಿಗೆ ಅಸಭ್ಯ ವರ್ತನೆ: ಸಾರ್ವಜನಿಕರಿಂದ ಗೂಸಾ, ವ್ಯಕ್ತಿ ಸಾವು

post-bars

Leave a Comment

Related post