Back To Top

 ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ.ವಂಚನೆ: ಅಪರಾಧಿಗೆ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ
April 8, 2025

ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ.ವಂಚನೆ: ಅಪರಾಧಿಗೆ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ

ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಅಪರಾಧಿ ರಾಹುಲ್ ತೋನ್ಸೆ ಎಂಬಾತನಿಗೆ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.

ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಅಪರಾಧಿ ರಾಹುಲ್ ತೋನ್ಸೆ ಎಂಬಾತನಿಗೆ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.
ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ 2018-19ರಲ್ಲಿ ಸಂಜನಾ ಗಲ್ರಾನಿಯಿಂದ 45 ಲಕ್ಷ ರೂ ಪಡೆದು ವಂಚಿಸಿದ್ದ ಆರೋಪವಿತ್ತು.ದಂಡದ ಮೊತ್ತದಲ್ಲಿ 10 ಸಾವಿರ ರೂ ಕೋರ್ಟ್ ಶುಲ್ಕವನ್ನು ಕಡಿತಗೊಳಿಸಿ ಉಳಿದ 61.40 ಲಕ್ಷ ರೂಪಾಯಿಗಳನ್ನು ದೂರುದಾರೆ ಸಂಜನಾಗೆ ನೀಡಬೇಕು.
ನಿಗದಿತ ಸಮಯದಲ್ಲಿ ದಂಡದ ಮೊತ್ತವನ್ನು ಪಾವತಿ ಮಾಡಿದರೆ 6 ತಿಂಗಳ ಶಿಕ್ಷೆಯನ್ನು ಮಾಫಿ ಮಾಡಲಾಗುತ್ತದೆ. ಇಲ್ಲವಾದರೆ, 6 ತಿಂಗಳು ಜೈಲು ಮತ್ತು ದಂಡವನ್ನು ಪಾವತಿ ಮಾಡಬೇಕೆಂದು ನ್ಯಾಯಾಲಯ ತೀರ್ಪಿನಲ್ಲಿ ತಿಳಿಸಿದೆ. ಗೋವಾ ಮತ್ತು ಕೊಲಂಬೋದಲ್ಲಿ ಕ್ಯಾಸಿನೋಗಳ ವ್ಯವಸ್ಥಾಪಕ ನಿರ್ದೇಶಕನಾಗಿದ್ದೇನೆ. ನಾನು ಹೇಳಿದ ಕಡೆಗಳಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಸಿಗಲಿದೆ ಎಂದು ರಾಹುಲ್ ಸಂಜನಾಗೆ ಆಮಿಷವೊಡ್ಡಿದ್ದ. ಈ ಕುರಿತು ಇಂದ್ರಾನಗರ ಠಾಣೆಯಲ್ಲಿ ತೊನ್ಸೆ ಮತ್ತು ಕುಟುಂಬದ ವಿರುದ್ಧ ಪ್ರಕರಣದ ದಾಖಲಾಗಿತ್ತು. ರಾಹುಲ್ ತಂದೆ ರಾಮಕೃಷ್ಣ ತಾಯಿ ರಾಜೇಶ್ವರಿ ವಿರುದ್ಧ ಕೂಡ FIR ದಾಖಲಾಗಿತ್ತು.

ಇದನ್ನು ಓದಿ:

https://infomindz.in/muttina-bale-beesida-shikshaki/
Prev Post

ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು

Next Post

24 ಗಂಟೆಗಳಲ್ಲಿ ಗಾಝಾ ಪಟ್ಟಿಯಲ್ಲಿ ಕನಿಷ್ಠ 60 ಫೆಲೆಸ್ತೀನೀಯರ ಸಾವು, ವೈದ್ಯಕೀಯ ವರದಿ…

post-bars

Leave a Comment

Related post