Back To Top

 ಸಬ್ ಇನ್ಸ್ ಪೆಕ್ಟರ್ ಮಗನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ
April 9, 2025

ಸಬ್ ಇನ್ಸ್ ಪೆಕ್ಟರ್ ಮಗನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಗನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

ದಕ್ಷಿಣಕನ್ನಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಗನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
17 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ PSI ಮಗ ಅತ್ಯಾಚಾರ ಎಸಗಿದ್ದಾನೆ.ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಒಂದು ಕೃತ್ಯ ಎಸಗಿದ್ದಾನೆ. ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿ ಇನ್ಸ್ಪೆಕ್ಟರ್ ಮಗ ಅತ್ಯಾಚಾರ ಎಸಗಿದ್ದಾನೆ.ಅಲ್ಲದೇ ಬಾಲಕಿಗೆ ಬೆದರಿಸಿ ಏಳೆಂಟು ಬಾರಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್‌ಐ ಒಬ್ಬರ ಪುತ್ರ ಮಂಜುನಾಥ್ ಎನ್ನುವ ಕಾಮುಕನಿಂದ ಈ ಒಂದು ಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೋಕ್ಸೋ ಕೇಸ್ ದಾಖಲಿಸಿ, ಇದೀಗ ಪೊಲೀಸರು ಆರೋಪಿ ಮಂಜುನಾಥನನ್ನು ಅರೆಸ್ಟ್ ಮಾಡಿದ್ದಾರೆ.

Prev Post

ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆ

Next Post

ರಾಜ್ಯದ ಮುಖ್ಯಮಂತ್ರಿ ಬಗ್ಗೆ ಮತ್ತೆ ಅಚ್ಚರಿ ಹೇಳಿಕೆ ನೀಡಿದ ಕೋಡಿ ಸ್ವಾಮೀಜಿ

post-bars

Leave a Comment

Related post