Back To Top

 ಕಾಶ್ಮೀರ ದಾಳಿ: ಅಮಿತ್ ಶಾಗೆ ಕರೆ ಮಾಡಿ ಮಾಹಿತಿ ಪಡೆದ ನರೇಂದ್ರ ಮೋದಿ

ಕಾಶ್ಮೀರ ದಾಳಿ: ಅಮಿತ್ ಶಾಗೆ ಕರೆ ಮಾಡಿ ಮಾಹಿತಿ ಪಡೆದ ನರೇಂದ್ರ ಮೋದಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಸೌದಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಸೌದಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ದಾಳಿಯ ಹಿನ್ನಲೆಯಲ್ಲಿ ಉಗ್ರರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಅವರು ಅಮಿತ್ ಶಾ ಅವರಿಗೆ ಸೂಚಿಸಿದ್ದಾರೆ. ಪ್ರಧಾನಿ ಸೂಚನೆಯಂತೆ ಗೃಹ ಸಚಿವ ಅಮಿತ್‌ ಶಾ ಅವರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

ಅಮಿತ್ ಶಾ ಅವರು ದೆಹಲಿಯಲ್ಲಿ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ, ಇದರಲ್ಲಿ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ದೇಕಾ ಹಾಗೂ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಭಾಗವಹಿಸಿದ್ದರು. ಅಲ್ಲದೆ, ದಾಳಿಯ ಸ್ಥಳಕ್ಕೆ ಭದ್ರತಾ ಪಡೆಗಳು ಹಾಗೂ ವೈದ್ಯಕೀಯ ತಂಡಗಳನ್ನು ಕಳುಹಿಸಲಾಗಿದೆ. ಈ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಅವರ ಜೊತೆ 25ಕ್ಕೂ ಹೆಚ್ಚಿನ ಮಂದಿಯ ಸಾವಿನ ವರದಿ ಬಂದಿದೆ. ಅವರು ಪತ್ನಿ ಪಲ್ಲವಿ ಮತ್ತು ಮಗ ಅಭಿಜೇಯನೊಂದಿಗೆ ಪ್ರವಾಸಕ್ಕೆ ತೆರಳಿದ್ದರು. 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ದಾಳಿ ಅಮರನಾಥ ಯಾತ್ರೆಗೆ ಮುನ್ನ ಸಂಭವಿಸಿದ್ದು, ಇದರ ಪರಿಣಾಮವಾಗಿ ಭದ್ರತೆ ಬಗ್ಗೆ ಆತಂಕವಿದೆ.

ಇದನ್ನು ಓದಿ:

https://infomindz.in/kannige-karada-pudi-erachi-chuchi-kole/
Prev Post

ಪಾಕಿಸ್ತಾನ ಭಯೋತ್ಪಾದಕರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

Next Post

ಭಯೋತ್ಪಾದಕ ದಾಳಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್

post-bars

Leave a Comment

Related post