Back To Top

 ಯಾವುದೇ ಕ್ಷಣದಲ್ಲಿಯೂ ಭಾರತ ದಾಳಿಗೆ: ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್
April 30, 2025

ಯಾವುದೇ ಕ್ಷಣದಲ್ಲಿಯೂ ಭಾರತ ದಾಳಿಗೆ: ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್

ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ಹತ್ಯೆಗೈದ ಭಯೋತ್ಪಾದಕ ದಾಳಿಯ ನಂತರ ಭಾರತವು ದಾಳಿಗೆ ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ನಡೆಯುವ ಸಾಧ್ಯತೆ ಇದೆ’ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್ ಹೇಳಿದ್ದಾರೆ.

ಇಸ್ಲಾಮಾಬಾದ್: ‘ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ಹತ್ಯೆಗೈದ ಭಯೋತ್ಪಾದಕ ದಾಳಿಯ ನಂತರ ಭಾರತವು ದಾಳಿಗೆ ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ನಡೆಯುವ ಸಾಧ್ಯತೆ ಇದೆ’ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್ ಹೇಳಿದ್ದಾರೆ. ಪಹಲ್ಗಾಮ್ ದಾಳಿಯ ಹೊಣೆ ಹೊತ್ತಿರುವ ದಿ ರೆಸಿಸ್ಟಂಟ್‌ ಫ್ರಂಟ್‌ಗೆ ಪಾಕಿಸ್ತಾನ ಮೂಲಕ ನಿಷೇಧಿತ ಜೈಶ್ ಎ ಮೊಹಮ್ಮದ್‌ ಸಂಘಟನೆಯ ಬೆಂಬಲವಿದೆ ಎಂದು ಭಾರತ ವಾದಿಸಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರನ್ನೂ ಹುಡುಕಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನದ ಸೇನೆಯ ಸಿದ್ಧತೆ ಕುರಿತು ಮಾತನಾಡಿರುವ ಸಚಿವ ಆಸಿಫ್‌, ‘ಕಾಲ ಸನ್ನಿಹಿತವಾಗಿದೆ. ಹೀಗಾಗಿ ನಮ್ಮ ಸೇನೆಯನ್ನು ಬಲಪಡಿಸುತ್ತಿದ್ದೇವೆ. ಸಂದಿಗ್ಧ ಸಂದರ್ಭದಲ್ಲಿ ಪ್ರಮುಖ ಕಾರ್ಯತಂತ್ರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವೆಲ್ಲವನ್ನೂ ತೆಗೆದುಕೊಳ್ಳಲಾಗಿದೆ’ ಎಂದಿದ್ದಾರೆ. ವಾಗ್ಯುದ್ಧಗಳು ಹೆಚ್ಚಾಗಿವೆ. ಭಾರತದ ದಾಳಿಯ ಸಾಧ್ಯತೆ ಕುರಿತು ಸರ್ಕಾರಕ್ಕೆ ಸೇನೆ ಮಾಹಿತಿ ನೀಡಿದೆ. ನಮ್ಮ ಅಸ್ತಿತ್ವಕ್ಕೆ ನೇರ ಅಪಾಯ ಎದುರಾದರೆ ಮಾತ್ರ ಅಣ್ವಸ್ತ್ರ ಉಪಯೋಗಿಸಲಾಗುವುದು’ ಎಂದಿದ್ದಾರೆ.ಭಾರತ ಮತ್ತು ಪಾಕಿಸ್ತಾನ ನಡುವೆ ಈವರೆಗೂ ಎರಡು ಪ್ರಮುಖ ಯುದ್ಧಗಳು ನಡೆದಿವೆ. ಪಹಲ್ಗಾಮ್ ದಾಳಿಯಲ್ಲಿ ಪಾಲ್ಗೊಂಡ ಇಬ್ಬರು ಭಯೋತ್ಪಾದಕರು ಪಾಕಿಸ್ತಾನದವರು ಎಂದು ಭಾರತ ಹೇಳಿದೆ. ಈ ಆರೋಪವನ್ನು ಪಾಕಿಸ್ತಾನ ತಳ್ಳಿಹಾಕಿದೆ.

ಇದನ್ನು ಓದಿ:

https://infomindz.in/patharaguttida-pak
Prev Post

ಮನೆ ಮಾಲೀಕನ ಪತ್ನಿಯನ್ನೇ ಪ್ರೀತಿಸಿ, ಮದುವೆಯಾದ ವ್ಯಕ್ತಿ ಅಪಹರಿಸಿ ಕೊಲೆ

Next Post

ಕೊಡಗಿನಲ್ಲಿ ಪ್ರವಾಸೋದ್ಯಮದ ಬೆಳವಣಿಗೆ

post-bars

Leave a Comment

Related post