ಭಾರತದ ವಿರುದ್ಧ ಪ್ರತಿದಾಳಿಗೆ ಪಾಕ್ ಕುತಂತ್ರ: ಸೇನೆಗೆ ಪರಮಾಧಿಕಾರ ನೀಡಿದ ಪ್ರಧಾನಿ ಶೆಹಬಾಜ್ ಶರೀಫ್
ಕಾಶ್ಮೀರದಲ್ಲಿ (Kashmir) ನಡೆದ ಹಿಂದೂಗಳ ನರಮೇಧಕ್ಕೆ ಭಾರತ ಪ್ರತೀಕಾರದ ದಾಳಿ ನಡೆಸಿದೆ. ʻಆಪರೇಷನ್ ಸಿಂಧೂರʼ ಹೆಸರಿನಡಿ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (PoK) 9 ಉಗ್ರ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಆದ್ರೂ ಕುತಂತ್ರ ಬುದ್ದಿ ಬಿಡದ ಪಾಕ್ ಭಾರತದ ವಿರುದ್ಧ ಪ್ರತಿದಾಳಿಗೆ ಸಂಚು ರೂಪಿಸುತ್ತಿದೆ.
ಇಸ್ಲಾಮಾಬಾದ್: ಕಾಶ್ಮೀರದಲ್ಲಿ (Kashmir) ನಡೆದ ಹಿಂದೂಗಳ ನರಮೇಧಕ್ಕೆ ಭಾರತ ಪ್ರತೀಕಾರದ ದಾಳಿ ನಡೆಸಿದೆ. ʻಆಪರೇಷನ್ ಸಿಂಧೂರʼ ಹೆಸರಿನಡಿ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (PoK) 9 ಉಗ್ರ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಆದ್ರೂ ಕುತಂತ್ರ ಬುದ್ದಿ ಬಿಡದ ಪಾಕ್ ಭಾರತದ ವಿರುದ್ಧ ಪ್ರತಿದಾಳಿಗೆ ಸಂಚು ರೂಪಿಸುತ್ತಿದೆ. ಇಂದು ಮಧ್ಯಾಹ್ನದ ಬಳಿಕ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ಕರೆದ ಪ್ರಧಾನಿ ಶೆಹಬಾಜ್ ಶರೀಫ್ (Shehbaz Sharif), ಭಾರತದ ಪ್ರತೀಕಾರದ ದಾಳಿಯನ್ನ ತೀವ್ರವಾಗಿ ಖಂಡಿಸಿದ್ದಾರೆ. ಅಪ್ರಚೋದಿತ ಮತ್ತು ಕಾನೂನುಬಾಹಿರ ಯುದ್ಧ ಕೃತ್ಯ ಎಂದು ಕರೆದಿದ್ದಾರೆ. ಅಲ್ಲದೇ ಭಾರತದ ವಿರುದ್ಧ ದಾಳಿಗೆ ಸೇನೆಗೆ (Pakistan Army) ಅಧಿಕಾರ ನೀಡಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ಏನಿದು ʻಆಪರೇಷನ್ ಸಿಂಧೂರʼ?
ಕಳೆದ ಏಪ್ರಿಲ್ 22ರಂದು ಕಾಶ್ಮೀರದ ಪೆಹಲ್ಗಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನ ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ಮಂಗಳವಾರ ತಡರಾತ್ರಿ 1:44 ಗಂಟೆ ಸುಮಾರಿಗೆ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಪಾಕ್ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿದೆ.
ಇದನ್ನು ಓದಿ: