Back To Top

 ಮಿಸೈಲ್‌ ದಾಳಿಗೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಗಡಗಡ
May 9, 2025

ಮಿಸೈಲ್‌ ದಾಳಿಗೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಗಡಗಡ

ಭಾರತೀಯ ಸೇನೆ ನಡೆಸಿದ ಮಿಸೈಲ್‌ ದಾಳಿಗೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಗಡಗಡ ನಡುಗುವಂತಾಗಿದೆ.

ಇಸ್ಲಾಮಾಬಾದ್: ಭಾರತೀಯ ಸೇನೆ ನಡೆಸಿದ ಮಿಸೈಲ್‌ ದಾಳಿಗೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಗಡಗಡ ನಡುಗುವಂತಾಗಿದೆ. ಹೀಗಾಗಿ ಪಾಕ್ ಪ್ರಧಾನಿ ಬಿಲ ಸೇರಿದ್ದಾರೆ. ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿಯಾಗಿರುವ ಕುರಿತು ವರದಿಯಾಗಿದ್ದು, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಾಗಿದ್ದಾರೆ ಎನ್ನಲಾಗಿದೆ.ಪಾಕ್‌ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಶೆಹಬಾಜ್‌ ಶರೀಫ್‌ ಅವರ ಮನೆಯಿದೆ. ಮನೆಗೆ 20 ಕಿಮೀ ದೂರದಲ್ಲೇ ಸ್ಫೋಟವಾಗಿದೆ ಎನ್ನಲಾಗಿದೆ. ಭಾರತದ ದಾಳಿಗೆ ಪಾಕ್‌ ಪ್ರಧಾನಿಯೂ ಬೆಚ್ಚಿದ್ದಾರೆ. ಪಾಕಿಸ್ತಾನದಲ್ಲಿ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ಹಲವು ನಗರಗಳು ಕತ್ತಲಲ್ಲಿ ಸಿಲುಕಿವೆ. ಕೆಲವು ನಗರಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತವಾಗಿದೆ. ಪಾಕ್‌ ನಾಗರಿಕರಿಗೆ ಅಲ್ಲಿನ ಸ್ಥಳೀಯ ಆಡಳಿತಗಳಿಂದ ಸೂಚನೆ ನೀಡಿದೆ. ಪಾಕಿಸ್ತಾನದ ಪೈಲಟ್‌ ನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ.

Prev Post

ನೌಕಾಪಡೆಯಿಂದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ನಿಯೋಜನೆ

Next Post

ಪಾಕಿಸ್ತಾನದ ಡ್ರೋನ್‌, ಕ್ಷಿಪಣಿಗಳ ದಾಳಿ ವಿಫಲಗೊಳಿಸಿದ ಭಾರತ

post-bars

Leave a Comment

Related post