Back To Top

 ಬೆತ್ತಲಾಗಿ ಬಂದು ಮೊಬೈಲ್ ಮಾರಾಟ ಮಳಿಗೆಯಲ್ಲಿ 85 ಮೊಬೈಲ್ ದೋಚಿದ ಕಳ್ಳ

ಬೆತ್ತಲಾಗಿ ಬಂದು ಮೊಬೈಲ್ ಮಾರಾಟ ಮಳಿಗೆಯಲ್ಲಿ 85 ಮೊಬೈಲ್ ದೋಚಿದ ಕಳ್ಳ

ಬೆಂಗಳೂರಿನಲ್ಲಿ ಬೆತ್ತಲಾಗಿ ಬಂದು ಮೊಬೈಲ್ ಮಾರಾಟ ಮಳಿಗೆಯ ಹಿಂಬದಿ ಗೋಡೆ ಕರೆ ಕೊರೆದು 85 ಮೊಬೈಲ್ ದೋಚಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಬೆತ್ತಲಾಗಿ ಬಂದು ಮೊಬೈಲ್ ಮಾರಾಟ ಮಳಿಗೆಯ ಹಿಂಬದಿ ಗೋಡೆ ಕರೆ ಕೊರೆದು 85 ಮೊಬೈಲ್ ದೋಚಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೇ 9ರ ತಡರಾತ್ರಿ ಹೊಂಗಸಂದ್ರ ಬಳಿಯ ದಿನೇಶ್ ಎಂಬಾತನಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್‌ನಲ್ಲಿ ಕಳ್ಳತನ ಮಾಡಿದ್ದ ಅರಕೆರೆಯಲ್ಲಿ ವಾಸವಾಗಿರುವ ಅಸ್ಸಾಂ ಮೂಲದ ಇಕ್ರಂ ಉಲ್ ಹಸನ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.ಆರೋಪಿಯಿಂದ ಕಳವು ಮಾಡಿದ ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿ ಹಸನ್ ಮೂರು ತಿಂಗಳ ಹಿಂದೆ ಕೆಲಸ ಹುಡುಕಿಕೊಂಡು ಬಂದು ಅರಕೆರೆಯಲ್ಲಿ ನೆಲೆಸಿದ್ದ. ಮೊದಲು ಸೆಂಟ್ರಲ್ ಮಾಲ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ನಂತರ ಮತ್ತೊಂದು ಮಳಿಗೆಯಲ್ಲಿ ಸ್ವಚ್ಛತಾ ಕೆಲಸಗಾರನಾಗಿ ದುಡಿಯುತ್ತಿದ್ದ. ಸುಲಭವಾಗಿ ಹಣ ಸಂಪಾದಿಸಲು ಕಳ್ಳತನಕ್ಕೆ ಇಳಿದಿದ್ದ. ಮೊಬೈಲ್ ಅಂಗಡಿ ಮಾಲೀಕ ದಿನೇಶ್ ಎಂದಿನಂತೆ ಅಂಗಡಿ ವಹಿವಾಟು ಮುಗಿಸಿ ಬೀಗ ಹಾಕಿ ಮನೆಗೆ ತೆರಳಿದ್ದರು. ತಡರಾತ್ರಿ ಗೋಡೆ ಕೊರೆದು ಬೆತ್ತಲೆಯಾಗಿ ಒಳ ನುಗ್ಗಿದ ಹಸನ್ ಮುಖಚಹರೆ ಕಾಣಿಸಿದಂತೆ ಮಾಸ್ಕ್ ಹಾಕಿಕೊಂಡಿದ್ದ. ಲಕ್ಷಾಂತರ ರೂ. ಮೌಲ್ಯದ 85 ಮೊಬೈಲ್ ಗಳನ್ನು ಕಳವು ಮಾಡಿದ್ದ.

ಇದನ್ನು ಓದಿ:

https://infomindz.in/50-drone-nikrise-golisuvalli-bharathiya-sene-yashasvi/
Prev Post

ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಬಹುದೆಂದ ಅಲಹಾಬಾದ್ ಕೋರ್ಟ್

Next Post

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ

post-bars

Leave a Comment

Related post