Back To Top

 ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ
May 17, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ

ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ ₹2,000 ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹10,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹2,000 ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹12,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹12,500 ಆಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ ₹2,000 ಗಳಷ್ಟು ಗೌರವಧನ ಹೆಚ್ಚಳವಾಗಲಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ₹12,000 ನಿಗದಿಯಾಗಿತ್ತು. ಇಂದಿನ ಆದೇಶದಿಂದ ಪರಿಷ್ಕೃತ ಗೌರವ ಸಂಭಾವನೆಯು ಅತಿಥಿ ಉಪನ್ಯಾಸಕರಿಕೆ ₹14,000 ಆಗಲಿದೆ.

ಇದನ್ನು ಓದಿ:

https://infomindz.in/maji-sena-sainika-pathiyannu-kondu-6-tundu-madida-patni/
Prev Post

ಬೆತ್ತಲಾಗಿ ಬಂದು ಮೊಬೈಲ್ ಮಾರಾಟ ಮಳಿಗೆಯಲ್ಲಿ 85 ಮೊಬೈಲ್ ದೋಚಿದ ಕಳ್ಳ

Next Post

ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದಾಗ ಸೌಜನ್ಯದಿಂದ ವರ್ತಿಸಿ: ರಾಜ್ಯ ಸರ್ಕಾರ ಮಹತ್ವದ ಆದೇಶ

post-bars

Leave a Comment

Related post