Back To Top

 ಗರ್ಭಿಣಿ ಪ್ರಿಯತಮೆ ಜತೆ ಸೇರಿ ಪ್ರಿಯಕರನಿಂದ ಸರ ಕಳವು
June 3, 2025

ಗರ್ಭಿಣಿ ಪ್ರಿಯತಮೆ ಜತೆ ಸೇರಿ ಪ್ರಿಯಕರನಿಂದ ಸರ ಕಳವು

ಸಂಸಾರಸ್ಥನಾಗಿದ್ದವನಿಗೆ ಮಕ್ಕಳಿದ್ದರು. ಆದರೆ, ಅಷ್ಟಾದರೂ ಇನ್ನೊಬ್ಬ ಯುವತಿ ಮೇಲೆ ಕಣ್ಣು ಹಾಕಿದ್ದ. ಮದುವೆಯಾಗದೆ ಆಕೆಯನ್ನು ತಾಯಿಯಾಗುವಂತೆ ಮಾಡಲು ಮುಂದಾಗಿದ್ದ. ಪ್ರಿಯತಮೆ ಸಾಕಲು ಕಳ್ಳ ದಾರಿ ಹಿಡಿದಿದ್ದ. ಬೈಕ್, ಸರ ಕಳ್ಳತನ ಮಾಡಿದ ನಂತರ ಆ ಜೋಡಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಗೌರಿಬಿದನೂರಿನ (Gauribidanur) ಮುದುಗೆರೆಯ ನಿವಾಸಿಯಾದ ಗೋವಿಂದರಾಜು ಎಂಬಾತ ಮದುವೆಯಾಗಿ ಮಕ್ಕಳಿದ್ದರೂ ಮತ್ತೊಬ್ಬ ಯುವತಿ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಆಕೆ ಜತೆ ಅಕ್ರಮವಾಗಿ ಸಂಸಾರ ನಡೆಸುವುದಕ್ಕೆಂದು ಕಳ್ಳತನ (Theft) ಮಾಡಿದ್ದಾನೆ. ಕೊನೆಗೆ ಇಬ್ಬರೂ ಪೊಲೀಸರ ಅತಿಥಿಗಳಾಗಿದ್ದಾರೆ. ಗೋವಿಂದರಾಜು ಅಜ್ಜಿಯ ಆಸರೆಯಲ್ಲಿದ್ದ ಯುವತಿಯನ್ನು ಗರ್ಭಿಣಿ ಮಾಡಿದ್ದ. ಈ ವಿಷಯ ಊರಿಗೆಲ್ಲ ಗೊತ್ತಾಗುತ್ತಿದ್ದಂತೆಯೇ, ಇಬ್ಬರೂ ಊರು ಬಿಟ್ಟು ತೆರಳಿದ್ದರು. ಗಾರೆ ಕೆಲಸ ಮಾಡುವ ಗೋವಿಂದರಾಜುಗೆ ಬಾಡಿಗೆ ಮನೆ ಮಾಡಲು ಹಣವಿರಲಿಲ್ಲ. ಇದಕ್ಕಾಗಿ ಕಳ್ಳತನದ ಹಾದಿ ಹಿಡಿದಿದ್ದಾನೆ. ಮೊದಲು ಗೋವಿಂದರಾಜು ಬೈಕ್‌ವೊಂದನ್ನ ಕದ್ದಿದ್ದ. ಅದೇ ಬೈಕ್‌ನಲ್ಲೇ ಇಬ್ಬರೂ, ಕಳವಾರ ಗ್ರಾಮದ ಬಳಿ ನಿರ್ಮಾಣ ಹಂತದ ಒಂಟಿ ತೋಟದ ಮನೆಗೆ ತೆರಳಿದ್ದರು. ಅಲ್ಲಿದ್ದ ಅಜ್ಜಿ ಅಂಜನಮ್ಮ ಎಂಬವರ ಬಾಯಿಗೆ ಬಟ್ಟೆ ತುರುಕಿ ಹಲ್ಲೆ ಮಾಡಿದ್ದರು. ಬಳಿಕ 50 ಗ್ರಾಂ ಚಿನ್ನದ ಮಾಂಗಲ್ಯ ಸರ ದೋಚಿದ್ದರು.

ಗೋವಿಂದರಾಜುವಿನಿಂದಾಗಿ ಯುವತಿ ಈಗ 8 ತಿಂಗಳ ಗರ್ಭಿಣಿ. ಊರಿನಿಂದ ಓಡಿಬಂದಿದ್ದ ಆತನಿಗೆ ಈಗ ಆಕೆ ಜತೆ ಬಾಡಿಗೆ ಮನೆ ಮಾಡಬೇಕಾದ ಅನಿವಾರ್ಯತೆ ಇತ್ತು. ಅದಕ್ಕೆ ಹಣಬೇಕಾಗಿತ್ತು. ಅದಕ್ಕೆ ಮೊದಲು ಸಂಚು ಹೂಡಿ ಬೈಕ್ ಕಳವು ಮಾಡಿದ್ದರು. ನಂತರ ಬೈಕ್ ನಂಬರ್ ಪ್ಲೇಟ್ ಕಿತ್ತು ಹಾಕಿದ್ದರು. ಬೈಕಿನಲ್ಲಿ ಊರೂರು ಅಲೆಯುವಾಗಲೇ, ಅಂಜನಮ್ಮ ಇವರ ಕಣ್ಣಿಗೆ ಬಿದ್ದಿದ್ದರು. ಆದರೆ, ಇವರ ನಸೀಬು ಕೆಟ್ಟಿತ್ತು. ಇವರ ಓಡಾಟ, ಕಳ್ಳಾಟ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದರಿಂದಾಗಿ ಈಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಇದನ್ನು ಓದಿ:

https://infomindz.in/kamal-hasan-helikege-nati-ramya-akrosha/
Prev Post

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಗಂಭೀರ ಗಾಯಗೊಂಡಿದ್ದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಸಾವು

Next Post

ಐಪಿಎಲ್ ಸೀಸನ್ 18 ಅಂತಿಮ ಘಟ್ಟ: ರಕ್ತದಲ್ಲಿ ಆರ್ ಸಿಬಿ ಆಟಗಾರ ವಿರಾಟ್…

post-bars

Leave a Comment

Related post