Back To Top

 ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ
June 7, 2025

ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ

ಆರ್ಸಿಬಿ ತಂಡ ಐಪಿಎಲ್ ಟ್ರೋಪಿ ಗೆದ್ದ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿಗೆ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವಿಗೀಡಾಗಿರುವ ದುರಂತ ರಾಜ್ಯಾದ್ಯಂತ ಕೋಲಾಹಲ ಸೃಷ್ಟಿಸಿದೆ.

ಬೆಂಗಳೂರು: ಆರ್ಸಿಬಿ ತಂಡ ಐಪಿಎಲ್ ಟ್ರೋಪಿ ಗೆದ್ದ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿಗೆ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11ಮಂದಿ ಸಾವಿಗೀಡಾಗಿರುವ ದುರಂತ ರಾಜ್ಯಾದ್ಯಂತ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಲವರನ್ನು ಸರ್ಕಾರ ಅಮಾನತು ಮಾಡಿತ್ತು.ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಶಂಕರ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕೆಎಸ್ಸಿಎ ಖಜಾಂಚಿ ಜೈರಾಮ್ ಸಹ ರಾಜೀನಾಮೆ ನೀಡಿದ್ದಾರೆ. ಕೆಎಸ್ಸಿಎ ಅಧ್ಯಕ್ಷರಿಗೆ ಇಬ್ಬರೂ ಶುಕ್ರವಾರ ರಾತ್ರಿ ರಾಜೀನಾಮೆ ನೀಡಿರುವುದು ತಿಳಿದು ಬಂದಿದೆ.

Prev Post

ಬೆಂಗಳೂರು ಕಾಲ್ತುಳಿತ: ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 11 UDR ದಾಖಲು

Next Post

ಪೊಲೀಸ್ ಅಧಿಕಾರಿಗಳನ್ನು ಅಮಾನತು: ಸರ್ಕಾರದ ಈ ನಡೆಗೆ ವ್ಯಾಪಕ ಖಂಡನೆ

post-bars

Leave a Comment

Related post