ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆ ಎನ್ಐಎಗೆ ಹಸ್ತಾಂತರ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಿದೆ.
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕೆಂದು ಈ ಹಿಂದೆ ಪಟ್ಟು ಹಿಡಿದು ಪ್ರತಿಭಟಿಸಿದ್ದರು.ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು.
ಮೇ.01 ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.