ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಯುವಕನ ಬಂಧನ: infosys employee arrested
ರಾಜಧಾನಿಯಲ್ಲಿ ಅತ್ಯಂತ ನೀಚ ಕೃತ್ಯ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಕಂಪನಿ ನೌಕರನೊಬ್ಬ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. infosys employee arrested
ಬೆಂಗಳೂರು: ರಾಜಧಾನಿಯಲ್ಲಿ ಅತ್ಯಂತ ನೀಚ ಕೃತ್ಯ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಕಂಪನಿ ನೌಕರನೊಬ್ಬ ಶೌಚಾಲಯದಲ್ಲಿ (girls toilet) ಮಹಿಳಾ ಉದ್ಯೋಗಿಗಳ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಚ್ ಆರ್ ಸಿಬ್ಬಂದಿ ಪರಿಶೀಲನೆ ವೇಳೆ ಕೃತ್ಯ ಬೆಳಕಿಗೆ ಬಂದಿದೆ.
ಬಂಧಿತನನ್ನು ಇನ್ಫೋಸಿಸ್ ಕಂಪನಿಯ ಉದ್ಯೋಗಿ ಆಂಧ್ರಪ್ರದೇಶದ ಮೂಲದ ಸ್ವಪ್ನಿಲ್ ನಾಗೇಶ್ ಎಂದು ಗುರುತಿಸಲಾಗಿದೆ.
ಮಹಿಳೆಯರ ಶೌಚಾಲಯದಲ್ಲಿ ತನ್ನ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಆತ ಪಕ್ಕದ ಶೌಚಾಲಯದ ಕಮೋಡ್ ಮೇಲೆ ನಿಂತು ರೆಕಾರ್ಡ್ ಮಾಡಿದ್ದಾನೆ.
ಈತ ರೆಕಾರ್ಡ್ ಮಾಡುತ್ತಿರುವುದು ಎದುರುಗಡೆ ಡೋರ್ ಮೇಲೆ ಪ್ರತಿಬಿಂಬ ಮೂಡಿದೆ. ಕೂಡಲೇ ಹೊರ ಬಂದು ನೋಡಿದಾಗ ಯಾರೂ ಇರಲಿಲ್ಲ. ಮತ್ತೆ ಶೌಚಾಲಯದ ಒಳ ಹೋಗಿ ಆಕೆ ಪರಿಶೀಲನೆ ಮಾಡಿದ್ದಾರೆ. ಆಗ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಕೂಡಲೇ ಮಹಿಳೆ ಕಿರುಚಾಡಿದ್ದು, ಮಹಿಳಾ ಉದ್ಯೋಗಿ ಕ್ಷಮೆ ಕೇಳಿದ್ದಾನೆ. ಈ ಹಂತದಲ್ಲಿ ಎಚ್‌ಆರ್ ಸಿಬ್ಬಂದಿ ಬಂದು ಪರಿಶೀಲನೆ ಮಾಡಿದ್ದು, ಸುಮಾರು 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ಇದರಲ್ಲಿ ಪತ್ತೆಯಾಗಿದೆ.
ಈತನ ಮೊಬೈಲ್ ನಲ್ಲಿ ಹಲವು ಮಹಿಳೆಯರ ಅಶ್ಲೀಲ ವಿಡಿಯೋ ಪತ್ತೆಯಾಗಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಹಿಳಾ ಉದ್ಯೋಗಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರತಿಷ್ಠಿತ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿದ್ದ ಈತನ ಕೆಲಸಕ್ಕೆ ಕಂಪನಿ ಮಹಿಳಾ ಉದ್ಯೋಗಿಗಳು ಬೆಚ್ಚಿ ಬಿದ್ದಿದ್ದು ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ.
ಇದನ್ನು ಓದಿ: