ಮೆಜೆಸ್ಟಿಕ್ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸಂಚಾರ ಅಸ್ತವ್ಯಸ್ತ
ಜಂಕ್ಷನ್ ನಿಲ್ದಾಣ ಮೆಜೆಸ್ಟಿಕ್ ಮೆಟ್ರೋ mejestic metro stop ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಬೆಂಗಳೂರು: ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್ ನಲ್ಲಿmejestic ವ್ಯಕ್ತಿಯೊಬ್ಬ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದಾನೆ. ಟ್ರಾಫಿಕ್ trafficಕಿರಿಕಿರಿಯಿಂದ ಮೆಟ್ರೋ ಪ್ರಯಾಣಿಕರ ಸಂಚಾರ ಪ್ರಮಾಣ ಹೆಚ್ಚಾಗುತ್ತಿದೆ. ಈ ಮಧ್ಯೆ ಇಂಟರ್‌ಚೇಂಜ್ ನಿಲ್ದಾಣ ಮೆಜೆಸ್ಟಿಕ್ ಮೆಟ್ರೋ mejestic metro stop ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕೃತ ಮಾಹಿತಿ ನೀಡಿದೆ.
ಈ ವೇಳೆ ಅಲ್ಪಕಾಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಪ್ರಯಾಣಿಕರೊಬ್ಬರು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಹಸಿರು ಮಾರ್ಗದಲ್ಲಿ ಬರುತ್ತಿದ್ದ ರೈಲಿಗೆ ಎದುರಾಗಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವ್ಯಕ್ತಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಿ ರಕ್ಷಣೆ ಮಾಡಲಾಗಿದೆ. ಈ ಘಟನೆ ಆಗಸ್ಟ್ 11 ರಾತ್ರಿ 10 ಗಂಟೆ ಸುಮಾರಿಗೆ ಜರುಗಿದೆ. ಕೂಡಲೇ ಮೆಟ್ರೋ ಸಿಬ್ಬಂದಿ ರೆಡ್ ಅಲರ್ಟ್ ನೀಡಿತು. ಈ ಘಟನೆಯಿಂದ ಅರ್ಧ ಗಂಟೆ ಕಾಲ ಹಸಿರು ಹಾಗೂ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯವಾಯಿತು. ನಂತರ 10.28ಕ್ಕೆ ರೈಲು ಸೇವೆ ಎಂದಿನಂತೆ ಆರಂಭಿಸಲಾಯಿತು.
ಈ ವೇಳೆ ಮಾದಾವರದಿಂದ ಬರುವ ರೈಲು, ಕೆಂಗೇರಿ ಕಡೆಯಿಂದ, ವೈಟ್‌ಫಿಲ್ಡ್ ಹಾಗೂ ರೇಷ್ಮೆ ಸಂಸ್ಥೆಯಿಂದ ಬರುವ ರೈಲುಗಳಲ್ಲಿ ಅಡಚಣೆ ಉಂಟಾಯಿತು. ಪ್ರಯಾಣಿಕನ ಮೇಲೆ ಹತ್ತಿದ ರೈಲಿನಲ್ಲಿದ್ದ ಪ್ರಯಾಣಿಕರನ್ನು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಇಳಿಯಲು ಬಿಡದೆ ಕೆಲ ಹೊತ್ತಿನ ಬಳಿಕ ಪ್ರಯಾಣಿಕರನ್ನು ಇಳಿಸಲಾಯಿತು.
ಈ ವೇಳೆ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದು ಕಂಡು ಬಂತು. ಸುಮಾರು ಅರ್ಧಗಂಟೆ ತಡವಾಗಿ ಪ್ರಯಾಣಿಕರು ಗಮ್ಯಸ್ಥಾನ ತಲುಪುವಂತಾಯಿತು.
ನರೇಂದ್ರ ಮೋದಿ ಅವರು ಹಳದಿ ಮಾರ್ಗಕ್ಕೆ ಚಾಲನೆ ನೀಡಿದ್ದು ಪ್ರಯಾಣಿಕರ ಸಂಚಾರ ಹೆಚ್ಚಾಗಿದೆ. ಪ್ರತಿ 25 ನಿಮಿಷಗಳಿಗೊಮ್ಮೆ ರೈಲುಗಳು ಸಂಚರಿಸುತ್ತವೆ. ಆದರೆ ಹಸಿರು ಮಾರ್ಗದಲ್ಲಿ ಪ್ರತಿ 4-8 ನಿಮಿಷಗಳಿಗೊಮ್ಮೆ ರೈಲುಗಳು ಕಾರ್ಯಾಚರಣೆ ಮಾಡುತ್ತವೆ. ಹಸಿರು ಮಾರ್ಗವೇ ಆರ್‌ವಿರಸ್ತೆಯಲ್ಲಿ ಹಳದಿ ಮಾರ್ಗ ಸಂಪರ್ಕಿಸುತ್ತದೆ. ಪ್ರಯಾಣಿಕರ ಸಂಖ್ಯೆ ಹೆಚ್ಚುವ ನಿರೀಕ್ಷೆ ಇದ್ದು, ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಮನವಿ ಮಾಡಿದ್ದಾರೆ.
ಇದನ್ನು ಓದಿ: