Back To Top

 ಗಣೇಶ ಹಬ್ಬದ ಪ್ರಯುಕ್ತ ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ : ಹೆಚ್ಚುವರಿ ಸೇವೆ ಕಲ್ಪಿಸಿದ್ದ ಕೆಎಸ್ಸಾರ್ಟಿಸಿ
August 25, 2025

ಗಣೇಶ ಹಬ್ಬದ ಪ್ರಯುಕ್ತ ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ : ಹೆಚ್ಚುವರಿ ಸೇವೆ ಕಲ್ಪಿಸಿದ್ದ ಕೆಎಸ್ಸಾರ್ಟಿಸಿ

26ರಂದು ಸ್ವರ್ಣಗೌರಿ ವ್ರತ, ದಿನಾಂಕ 27ರಂದು ಗಣೇಶ ಚತುರ್ಥಿ ಹಬ್ಬ gowri ganesha festival ವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ special ksrtc bus ಮಾಡಿರುತ್ತದೆ.

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ ಸಿಕ್ಕಿದ್ದು ಆಗಸ್ಟ್‌ 25 ಮತ್ತು 26ರಂದು ಬೆಂಗಳೂರಿನಿಂದ ವಿಶೇಷ ಬಸ್‌ ಸೇವೆಯನ್ನು ಕೆಎಸ್‌ಆರ್‌ಟಿಸಿ 1,500 ಹೆಚ್ಚುವರಿ ಬಸ್‌ ಅನುಕೂಲ ಮಾಡಿಕೊಡಲಿದೆ.
26ರಂದು ಸ್ವರ್ಣಗೌರಿ ವ್ರತ, ದಿನಾಂಕ 27ರಂದು ಗಣೇಶ ಚತುರ್ಥಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ.
ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 27 ಹಾಗೂ 31ರಂದು ವಿಶೇಷ ವಾಹನಗಳನ್ನು
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಇರಲಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ,

  • ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
  • ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
  • ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
  • ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.
    ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
    ಆಗಸ್ಟ್‌ 25 ಮತ್ತು 26ರಂದು ಬೆಂಗಳೂರಿನಿಂದ ವಿಶೇಷ ಬಸ್‌ ಸೇವೆ ಇರಲಿದೆ.
    ಹೆಚ್ಚಿನ ಮಾಹಿತಿಗಾಗಿ ಕೆಎಸ್ಸಾರ್ಟಿಸಿ ವೆಬ್ ಸೈಟ್ website ನಲ್ಲಿ ಮಾಹಿತಿ ಪಡೆಯಬಹುದಾಗಿದೆ.

ಇದನ್ನು ಓದಿ:

Prev Post

ಮಹಿಳೆಯನ್ನು ಹತ್ಯೆಗೈದು ಕಾರು ಕೆರೆಗೆ ಬಿದ್ದ ಕಥೆ ಕಟ್ಟಿದ ವ್ಯಕ್ತಿ

Next Post

ಆಟೋ ಸಾಲ ತೀರಿಸಲು ಸ್ನೇಹಿತೆ ಅಪಹರಿಸಿ ಕೊಲೆ ಮಾಡಿ ಮಾಂಗಲ್ಯ ಕದ್ದ ಚಾಲಕ…

post-bars

Leave a Comment

Related post