Back To Top

 ಪ್ರವೀಣ್ ನೆಟ್ಟಾರು ಹತ್ಯೆ ಕೇಸ್, ಪ್ರಮುಖ ಸಂಚುಕೋರನ ಬಂಧನ
January 22, 2025

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್, ಪ್ರಮುಖ ಸಂಚುಕೋರನ ಬಂಧನ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಠಿಸಿದ್ದ, ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಸಂಚುಕೋರನನ್ನು ಬಂಧಿಸುವಲ್ಲಿ ಎನ್ಐಎ (NIA) ಯಶಸ್ವಿಯಾಗಿದೆ. ಪ್ರವೀಣ್ ಹತ್ಯೆ ಕೇಸ್ ಪ್ರಮುಖ ಆರೋಪಿ ಅತೀಕ್ ಅಹಮ್ಮದ್ ಎಂಬಾತನನ್ನು ಬಂಧಿಸಿರುವುದಾಗಿ ಎನ್ಐಎ ತಿಳಿಸಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ 2022ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರು ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21ನೇ ಆರೋಪಿ ಅತೀಕ್ ಅಹ್ಮದ್ ಆಗಿದ್ದಾನೆ.
ಪಿಎಫ್ಐ ನಾಯಕತ್ವದ ಮಾರ್ಗದರ್ಶನದಲ್ಲಿ ಅತೀಕ್ ಈ ಪ್ರಕರಣದ ಪ್ರಮುಖ ಸಂಚುಕೋರ ಎಂದು ಗುರುತಿಸಲ್ಪಟ್ಟ ಮುಸ್ತಫಾ ಪೈಚಾರ್‌ಗೆ ಆಶ್ರಯ ಮತ್ತು ಸಹಾಯ ಮಾಡಿದ್ದ. ಜನರಲ್ಲಿ ಭಯ ಮತ್ತು ಕೋಮು ಅಶಾಂತಿಯನ್ನು ಪ್ರಚೋದಿಸಲು ಪಿಎಫ್ಐ ಕಾರ್ಯಸೂಚಿಯ ಭಾಗವಾಗಿ ಮುಸ್ತಫಾ ಈ ಕೊಲೆಯನ್ನು ಯೋಜಿಸಿ ಕಾರ್ಯಗತಗೊಳಿಸಿದ್ದ.
ದಾಳಿಯ ನಂತರ ಮುಸ್ತಫಾ ಪರಾರಿಯಾಗಿದ್ದ. ಅತೀಕ್ ಅವನನ್ನು ಚೆನ್ನೈಗೆ ಕರೆದೊಯ್ಯುವುದು ಸೇರಿದಂತೆ ಅವನ ಓಡಾಟಕ್ಕೆ ಅನುಕೂಲ ಮಾಡಿಕೊಟ್ಟಿದ್ದ. ಮೇ 2024 ರಲ್ಲಿ ಮುಸ್ತಫಾನನ್ನು ಬಂಧಿಸುವವರೆಗೂ ಕಾನೂನಿನ ಕೈಗಳಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ.
ಆಗಸ್ಟ್ 2022 ರಲ್ಲಿ ಸ್ಥಳೀಯ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡ ಎನ್ಐಎ, ಉದ್ದೇಶಿತ ಹತ್ಯೆಗಳನ್ನು ನಡೆಸಲು ಪಿಎಫ್ಐ “ಪಿಎಫ್ಐ ಸೇವಾ ತಂಡಗಳು” ಎಂಬ ರಹಸ್ಯ ತಂಡಗಳನ್ನು ರಚಿಸಿದೆ. ಇವು ಶಸ್ತ್ರಾಸ್ತ್ರ ಬಳಕೆ ಮತ್ತು ಕಣ್ಗಾವಲುಗಳಲ್ಲಿ ತರಬೇತಿ ನೀಡುತ್ತಿವೆ ಎಂದು ತನಿಖೆಯ ಸಮಯದಲ್ಲಿ ಕಂಡುಕೊಂಡಿತ್ತು. ಇನ್ನೂ ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ಏಜೆನ್ಸಿ ತನ್ನ ತನಿಖೆಯನ್ನು ಮುಂದುವರಿಸಿದೆ, ಅವರ ವಿರುದ್ಧ ಬಹುಮಾನಗಳನ್ನು ಘೋಷಿಸಲಾಗಿದೆ.

Prev Post

ಒಡಿಶಾ- ಛತ್ತೀಸ್‌ಗಡ ಗಡಿಯಲ್ಲಿ ಭದ್ರತಾ ಸಿಬ್ಬಂದಿಗಳಿಂದ 12 ನಕ್ಸಲರ ಎನ್‌ಕೌಂಟರ್‌

Next Post

ಆಸ್ಪತ್ರೆಯಿಂದ‌ ನಟ ಸೈಫ್‌ ಆಲಿ‌ ಖಾನ್ ಡಿಸ್ಚಾರ್ಜ್

post-bars

Leave a Comment

Related post