Back To Top

 ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮ : ರಾಜ್ಯಪಾಲರಿಂದ ಉದ್ಘಾಟನೆ
January 22, 2025

ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮ : ರಾಜ್ಯಪಾಲರಿಂದ ಉದ್ಘಾಟನೆ

ತುಮಕೂರು : ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ತ್ರಿವಿಧ ದಾಸೋಹಿ ಡಾ: ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಪ್ರಾರಂಭಗೊಂಡಿದೆ.

ಬೆಳಗ್ಗೆ 5 ಗಂಟೆಗೆ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದಿವೆ. ರುದ್ರಾಕ್ಷಿ ಮಂಟಪದಲ್ಲಿ ಶಿವಕುಮಾರ ಸ್ವಾಮೀಜಿ ಮೂರ್ತಿಯ ಮೆರವಣಿಗೆ ನಡೆಯಿತು. ಶ್ರೀ ಗಳ ಗದ್ದುಗೆಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದಿದ್ದು ಅಲಂಕಾರ ಮಾಡಲಾಗಿದೆ.

ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಭಾ ಸಮಾರಂಭ ಉದ್ಘಾಟಿಸಲಿದ್ದಾರೆ.
ಮೇಘಾಲಯ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಸಿ.ಹೆಚ್. ವಿಜಯಶಂಕರ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು, ಶ್ರೀ ಸಿದ್ದಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗ ಮಹಾಸ್ವಾಮಿ ಹಾಗೂ ಉತ್ತಾಧಿಕಾರಿ ಶ್ರೀ ಶಿವ ಸಿದ್ಧೇಶ್ವರ ಸ್ವಾಮಿ, ಮೈಸೂರಿನ ಶ್ರೀ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಶಿವರಾತ್ರಿದೇಶಿಕೇಂದ್ರಮಹಾಸ್ವಾಮಿ, ಶ್ರವಣಬೆಳಗೊಳ ಜೈನಮಠದ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸರಾದ ನಾಡೋಜ ಡಾ: ಗೊ.ರು.ಚನ್ನಬಸಪ್ಪ ಅವರಿಗೆ ಸಿದ್ಧಗಂಗಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮೈಸೂರಿನ ಸಾಹಿತಿ ಡಾ: ಹೆಚ್.ಟಿ. ಶೈಲಜಾ ಹಾಗೂ ತುಮಕೂರಿನ ಸಮಾಜ ಸೇವಕ ಜಿ.ಎನ್. ಬಸವರಾಜಪ್ಪ ಅವರಿಗೆ ಸಿದ್ಧಗಂಗಾ ಶಿವಕುಮಾರಶ್ರೀ ಪ್ರಶಸ್ತಿ, ಬೆಂಗಳೂರಿನ ಎಸ್. ಶಿವಾನಂದ ಶರ್ಮ, ಎಸ್.ಆರ್. ರೇಣುಕಾರಾಧ್ಯ, ವೆಂಕಟೇಶ ಗೌಡ, ಚಾಮರಾಜ ನಗರ ಜಿಲ್ಲೆ ಮುಳ್ಳೂರಿನ ಶಿವಕುಮಾರಮೂರ್ತಿ, ಚಿಕ್ಕಮಗಳೂರು ಜಿಲ್ಲೆ ಬಾಸೂರಿನ ಬಿ.ಎಂ. ಪರಮೇಶ್ವರಪ್ಪ(ಮರಣೋತ್ತರ) ಸಂಘಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

shiv
Prev Post

ಅಮೇರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್‌ ಟ್ರಂಪ್‌!

Next Post

ಅಧಿಕಾರಕ್ಕೆ ಬರುತ್ತಿದ್ದಂತೆ ಮಹತ್ವದ ನಿರ್ಣಯಗಳಿಗೆ ಟ್ರಂಪ್ ಸಹಿ

post-bars

Leave a Comment

Related post