Back To Top

 ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕನಿಂದ ಮಾರಣಾಂತಿಕ ಹಲ್ಲೆ: ಕೆಲಸಕ್ಕೆ ವಿಳಂಬವಾಗಿದ್ದೇ ಕಾರಣವಂತೆ!!?
January 25, 2025

ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕನಿಂದ ಮಾರಣಾಂತಿಕ ಹಲ್ಲೆ: ಕೆಲಸಕ್ಕೆ ವಿಳಂಬವಾಗಿದ್ದೇ ಕಾರಣವಂತೆ!!?

ಅಡ್ವಾನ್ಸ್ಡ್ ಹಣ ಪಡೆದು, ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ವಿಳಂಬವಾಗಿದ್ದಕ್ಕೆ ಮಾಲೀಕ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿ ಘಟನೆ ನಡೆದಿದೆ.

ವಿಜಯಪುರ: ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ. ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿರುವ ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ ಎಂಬಾತ ಹೀನಾಯ ಕೃತ್ಯ ಎಸಗಿದ್ದಾನೆ.

ನಾಗರಿಕ‌ ಸಮಾಜ ತಲೆತಗ್ಗಿಸುವ ಘಟನೆ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಇಟ್ಟಿಗೆ ಭಟ್ಟಿಯಲ್ಲಿ ಪೈಪ್‌ಗಳಿಂದ ಕಾರ್ಮಿಕರ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ. ಬಿಡಿ… ಬಿಡಿ… ಎಂದು ಪರಿಪರಿಯಾಗಿ ಕೇಳಿಕೊಂಡರೂ ಬಿಡದೇ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ.

ಗಾಂಧಿ ನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿಯಲ್ಲಿ ಘಟನೆ ನಡೆದಿದ್ದು ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಸದಾಶಿವ ಮಾದರ್, ಸದಾಶಿವ ಬಬಲಾದಿ, ಉಮೇಶ ಮಾದರ್ ಎಂಬುವರ ಮೇಲೆ ಪೈಪ್‌ಗಳನ್ನು ಬಳಸಿ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ.

ಅಡ್ವಾನ್ಸ್ಡ್ ಹಣ ಪಡೆದು, ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ವಿಳಂಬವಾಗಿದ್ದಕ್ಕೆ ಮಾಲೀಕ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಗಾಯಾಳು ಕಾರ್ಮಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ತನಿಖೆ ಬಳಿಕ ಸೂಕ್ತ ಕ್ರಮ:
ಈ ಘಟನೆಯ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ ವಿಜಯಪುರ ನಗರದ ಹೊರಭಾಗದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ನಡೆದ ಹಲ್ಲೆ ಖಂಡನೀಯ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವೆ. ಆರೋಪಿಗಳನ್ನು ತ್ವರಿತವಾಗಿ ಬಂಧಿಸಿ, ಕಾನೂನು ಪ್ರಕ್ರಿಯೆಯ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Prev Post

ಆಸ್ಪತ್ರೆಯಿಂದ‌ ನಟ ಸೈಫ್‌ ಆಲಿ‌ ಖಾನ್ ಡಿಸ್ಚಾರ್ಜ್

Next Post

ಪ್ರಯಾಗರಾಜ್‌ನ ಮಹಾ ಕುಂಭಮೇಳದಲ್ಲಿ ‘ಹಿಂದೂ ಏಕತಾ ಪಾದಯಾತ್ರೆ’

post-bars

Leave a Comment

Related post