Back To Top

 ಸತತ ಏರಿಕೆ ಕಂಡಿದ್ದ ಚಿನ್ನದ ದರ ಯಥಾಸ್ಥಿತಿ

ಸತತ ಏರಿಕೆ ಕಂಡಿದ್ದ ಚಿನ್ನದ ದರ ಯಥಾಸ್ಥಿತಿ

ಭಾನುವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,745 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,449 ರೂ. ಇದೆ.

ಬೆಂಗಳೂರು: ಕೆಲವು ದಿನಗಳಿಂದ ಸತತ ಏರಿಕೆ ಕಂಡಿದ್ದ ಚಿನ್ನದ ದರ ಇಂದು (ಫೆ. 2) ಯಥಾಸ್ಥಿತಿ ಕಾಯ್ದುಕೊಂಡಿದೆ, ಗ್ರಾಹಕರಿಗೆ ತುಸು ಸಮಾಧಾನ ತಂದಿದೆ.  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,745 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,449 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 61,960 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,450 ರೂ. ಮತ್ತು 100 ಗ್ರಾಂಗೆ 7,74,500 ರೂ. ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 67,592 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 84,490 ರೂ. ಮತ್ತು 100 ಗ್ರಾಂಗೆ 8,44,900 ರೂ. ಪಾವತಿಸಬೇಕಾಗುತ್ತದೆ.

ಬೆಳ್ಳಿ ದರ

ಇತ್ತ ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಬೆಳ್ಳಿ 1 ಗ್ರಾಂನ ಬೆಲೆ 99.50 ರೂ., 8 ಗ್ರಾಂಗೆ 796 ರೂ., 10 ಗ್ರಾಂ.ಗೆ 995 ರೂ. ಮತ್ತು 1 ಕೆಜಿಗೆ 99,500 ರೂ. ಪಾವತಿಸಬೇಕಾಗುತ್ತದೆ.

ಶುದ್ಧತೆ: ಚಿನ್ನಾಭರಣ ಖರೀದಿಸುವ ಮುನ್ನ ಅದರ ಶುದ್ಧತೆಯನ್ನು ಪರಿಶೀಲಿಸುವುದು ಅಗತ್ಯ. ಚಿನ್ನದ ಮೇಲೆ ಶುದ್ಧತೆಯನ್ನು ಸೂಚಿಸುವ ಬಿಐಎಸ್‌ (BIS) ಹಾಲ್‌ಮಾರ್ಕ್‌ ಇದೆ ಎನ್ನುವುದನ್ನು ಖಚಿತಪಡಿಸಿ. ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂಬುದನ್ನು ಆ ಮೂಲಕ ಪ್ರಮಾಣೀಕರಿಸಬಹುದು.

ಬೆಲೆ: ಚಿನ್ನದ ಬೆಲೆ ಪ್ರತಿ ದಿನ ಬದಲಾಗುತ್ತಿರುತ್ತದೆ. ಖರೀದಿಸುವ ಮುನ್ನ ಬೆಲೆ ಎಷ್ಟಿದೆ ಎನ್ನುವುದನ್ನು ಗಮನಿಸಿ. ಇದಕ್ಕಾಗಿ ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಪರಿಶೀಲಿಸುವುದನ್ನು ಮರೆಯಬೇಡಿ. ಮತ್ತೊಂದು ಮುಖ್ಯ ವಿಚಾರ ಎಂದರೆ ಬೆಲೆಗಳ ಹೋಲಿಕೆ. ಬೇರೆ ಬೇರೆ ಜ್ಯುವೆಲ್ಲರಿಗಳಲ್ಲಿ ವ್ಯತ್ಯಸ್ತ ಬೆಲೆಗಳಿರುತ್ತವೆ. ನೀವು ಚಿನ್ನ ಖರೀದಿಸುವ ಮುನ್ನ ಬೆಲೆಗಳನ್ನು ಹೋಲಿಸಿ ನೋಡಿ. ಇದರಿಂದ ನಿಮಗೆ ಸಾಕಷ್ಟು ಹಣ ಉಳಿತಾಯು ಮಾಡಬಹುದಾಗಿದೆ.

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್  ಮತ್ತು ವೇಸ್ಟೇಜ್ ಚಾರ್ಜ್ ಎಂದಿರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲ ಆಭರಣಗಳಿಗೆ ಮೇಕಿಂಗ್, ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ.

ಇದನ್ನು ಓದಿ:

https://infomindz.in/%e0%b2%a6%e0%b2%96%e0%b2%b2-%e0%b2%ac%e0%b2%b0%e0%b2%a6-%e0%b2%ac%e0%b2%9c%e0%b2%9f-8-%e0%b2%b8%e0%b2%b0%e0%b2%97%e0%b2%b3/
Prev Post

ಲೈಂಗಿಕ ಕಿರುಕುಳ ಆರೋಪ: ಅಪಪ್ರಚಾರ ದೂರು ದಾಖಲಿಸಿದ ರಾಮ್‌ಜೀ

Next Post

ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ 2.51 ಲಕ್ಷ ಕೋಟಿ ರೂ.

post-bars

Leave a Comment

Related post