ದಾಂಪತ್ಯ ಜೀವನ ಮುರಿದುಕೊಂಡ ಚಾಹಲ್- ಧನಶ್ರೀ ವರ್ಮಾ
ಮುಂಬೈ: ಟೀಮ್ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ತಮ್ಮ ಪತ್ನಿ ಧನಶ್ರೀ ವರ್ಮಾ ಅವರಿಂದ ಬೇರ್ಪಟ್ಟಿದ್ದಾರೆ. ವರದಿಗಳ ಪ್ರಕಾರ, ಇಬ್ಬರೂ ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ವಿಚ್ಛೇದನ ಪಡೆದಿದ್ದಾರೆ. ಆದರೆ ಇಬ್ಬರೂ ಬೇರೆಯಾಗಲು ಕಾರಣವೇನೆಂದು ಬಹಿರಂಗವಾಗಿಲ್ಲ. ಆದರೆ ಧನಶ್ರೀ ಮತ್ತು ಯುಜ್ವೇಂದ್ರ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಜೀವನದಲ್ಲಿ ಒಂದು ದೊಡ್ಡ ಘಟನೆ ನಡೆದಿರುವ ಬಗ್ಗೆ ಸುಳಿವು ನೀಡಿದ್ದಾರೆ.
ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ವಿಚ್ಛೇದನ ಪಡೆದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಮಾಧ್ಯಮ ವರದಿಗಳ ಪ್ರಕಾರ, ಇಬ್ಬರೂ ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ವಿಚ್ಛೇದನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಪರಸ್ಪರ ಬೇರೆಯಾಗಿದ್ದಾರೆ. ವಾಸ್ತವವಾಗಿ ಬಹಳ ದಿನಗಳಿಂದ ಇಬ್ಬರೂ ಬೇರೆಯಾಗಿ ಪ್ರತ್ಯೇಕವಾಗಿ ವಾಸಿಸಲಾರಂಭಿಸಿದ್ದರು. ಅಲ್ಲದೆ ಇಷ್ಟರಲ್ಲೇ ಈ ಇಬ್ಬರು ಅಧಿಕೃತವಾಗಿ ದೂರವಾಗಲಿದ್ದಾರೆ ಎಂಬ ವರದಿಗಳು ಆಗಾಗ್ಗೆ ಕೇಳಿ ಬರುತ್ತಿದ್ದವು. ಈಗ ಈ ಸುದ್ದಿ ದೃಢಪಟ್ಟಂತೆ ತೋರುತ್ತಿದ್ದು, ಚಾಹಲ್-ಧನಶ್ರೀ ನಡುವಿನ ದಾಂಪತ್ಯ ಜೀವನ ಕೇವಲ 4 ವರ್ಷಗಳಿಗೆ ಅಂತ್ಯಗೊಂಡಿದೆ.
ಇದನ್ನು ಓದಿ: