Back To Top

 ಉಪಾಹಾರ ಗೃಹ , ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಉಪಾಹಾರ ಗೃಹ , ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ಅನೇಕ ಹೋಟೆಲ್‌ಗಳಲ್ಲಿ ತಯಾರಾಗುವ ಇಡ್ಲಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಲ್ಲಿ ದೃಢಪಟ್ಟ ತಕ್ಷಣವೇ ಆರೋಗ್ಯ ಸಚಿವರು ಆ ಬಗ್ಗೆ ಕ್ರಮಕ್ಕೆ ಮುಂದಾಗಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಆಹಾರದಲ್ಲಿ ಅತಿಯಾದ ಬಣ್ಣ ಬಳಕೆ ಮತ್ತು ಗುಣಮಟ್ಟ ರಹಿತ ಆಹಾರ ಪೂರೈಕೆ ವಿಚಾರವಾಗಿ ಬೆಂಗಳೂರಿನ ಹೋಟೆಲ್ ಹಾಗೂ ಉಪಾಹಾರ ಗೃಹಗಳಿಂದ ಸಂಗ್ರಹಿಸಲಾದ ಇಡ್ಲಿ ಮತ್ತಿತರ ತಿಂಡಿಗಳಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕಗಳು ಪತ್ತೆಯಾಗಿವೆ. ಇನ್ನು ಮುಂದೆ ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಹೋಟೆಲ್, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು ಎಂದು ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.
ಸುಮಾರು 251 ತಿಂಡಿ ಹೋಟೆಲ್, ಅಂಗಡಿಗಳಿಂದ ಸ್ಯಾಂಪಲ್ಸ್ ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅವುಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಈ ಮೊದಲು ಹೋಟೆಲ್ ಗಳಲ್ಲಿ ಇಡ್ಲಿ ತಯಾರಿಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ ಈಗ ಹೆಚ್ಚಿನ ಕಡೆ ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಇದರಿಂದ ಅನಾರೋಗ್ಯಕ್ಕೆ ಕಾರಣವಾದ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಕಾರ್ಸಿನೋಜೆನಿಕ್ ಅಂಶ ಕ್ಯಾನ್ಸರಿಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಅನೇಕ ಹೋಟೆಲ್‌ಗಳಲ್ಲಿ ತಯಾರಾಗುವ ಇಡ್ಲಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಲ್ಲಿ ದೃಢಪಟ್ಟ ತಕ್ಷಣವೇ ಆರೋಗ್ಯ ಸಚಿವರು ಆ ಬಗ್ಗೆ ಕ್ರಮಕ್ಕೆ ಮುಂದಾಗಿದ್ದಾರೆ.
ಬೆಂಗಳೂರಿನ ಹಲವಡೆ ಇತ್ತೀಚೆಗೆ ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್‌ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಯು ಶಾಖಕ್ಕೆ ಒಡ್ಡಿಕೊಂಡು ಹಾನಿಕಾರಕ ವಸ್ತುವನ್ನು ಹೊರಸೂಸುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು.
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಆರೋಗ್ಯ ಇಲಾಖೆ ಅನೇಕ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಆ ಪೈಕಿ ಸುಮಾರು 50 ರಷ್ಟು ಸ್ಯಾಂಪಲ್ಸ್ ವರದಿ ಬಂದಿದ್ದು, ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ.

ಇದನ್ನು ಓದಿ:

https://infomindz.in/yeleneerinda-wine-tayarisi-sadaka-sabistan-augustin-bharathdali-modala-braige-prayoga/
Prev Post

ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

Next Post

ಸ್ವಾಭಿಮಾನ ಮತ್ತು ದಿಟ್ಟತೆಗೆ ಹೆಸರಾದ ಶ್ಯಾನುಭೋಗರ ಮಗಳು

post-bars

Leave a Comment

Related post