ನಟಿ ರನ್ಯಾ ರಾವ್ ಕೇಸ್ನಲ್ಲಿ ಸಚಿವರ ಕೈವಾಡ: ಡಿಸಿಎಂ ಡಿಕೆಶಿ ತನಿಖೆಗೆ ಅಸ್ತು
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಚಿನ್ನ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರನ್ನು ಬಂಧನ ಮಾಡಲಾಗಿದೆ. ಈ ಪ್ರಕರಣದಲ್ಲಿ ಪ್ರಭಾವಿ ಸಚಿವರ ಪಾತ್ರ ಇದೆ ಎಂಬ ಆರೋಪ ಕೇಳಿಬರುತ್ತಿದೆ. ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುತ್ತಿದೆ. ಕಾಂಗ್ರೆಸ್ ಸಚಿವರುಗಳಿಗೆ ರನ್ಯಾ ರಾವ್ ಫೋನ್ ಕರೆ ಮಾಡಿದ್ದಾರೆ, ಅದು ಬಹಿರಂಗವಾಗಲಿ ಎಂದು ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರನ್ಯಾರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಟಿ ರನ್ಯಾ ರಾವ್ ಅವರು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣದಲ್ಲಿ ಸಚಿವರಿಗೂ ಇದಕ್ಕೂ ಸಂಬಂಧವಿಲ್ಲ. ಕೇಂದ್ರ ಸರ್ಕಾರದವರು ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ ಮಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.