Back To Top

 ಮೆಟ್ರೋ ಗೆ ಕುಸಿದ ಆದಾಯ: ಜಾಹೀರಾತು ಮೊರೆ ಹೋದ BMRCL
March 15, 2025

ಮೆಟ್ರೋ ಗೆ ಕುಸಿದ ಆದಾಯ: ಜಾಹೀರಾತು ಮೊರೆ ಹೋದ BMRCL

ಮೆಟ್ರೋ ಟಿಕೆಟ್ ದರ ಏರಿಕೆಯಾದ ಮೇಲೆ ರೈಲಿನಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಇದರಿಂದ ಮೆಟ್ರೋಗೆ ನಷ್ಟ ಉಂಟಾಗಿದೆ.

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಆಗುತ್ತಿದ್ದಂತೆ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಇದರಿಂದ ಆದಾಯದಲ್ಲಿ ನಷ್ಟ ಉಂಟಾಗುತಿದೆಯಂತೆ. ಇದನ್ನು ಸರಿದೂಗಿಸಲು ನಮ್ಮ ಮೆಟ್ರೋ ರೈಲಿನ ಒಳ ಮತ್ತು ಹೊರಭಾಗದಲ್ಲಿ ಜಾಹೀರಾತು ಹಾಕಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ( BMRCL) ಮುಂದಾಗಿದೆ.
ಮೆಟ್ರೋ ಟಿಕೆಟ್ ದರ ಏರಿಕೆಯಾದ ಮೇಲೆ ರೈಲಿನಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಇದರಿಂದ ಮೆಟ್ರೋಗೆ ನಷ್ಟ ಉಂಟಾಗಿದೆಯಂತೆ.

ಇದರಿಂದ ತಪ್ಪಿಸಿಕೊಳ್ಳಲು ಬಿಎಂಆರ್ಸಿಎಲ್ ಜಾಹೀರಾತುಗಳ ಮೊರೆ ಹೋಗಿದ್ದು, ರೈಲಿನ ಮೇಲೆ ಜಾಹೀರಾತು ಹಾಕಲು ಟೆಂಡರ್ ಕರೆದಿದ್ದು ಖಾಸಗಿ ಕಂಪನಿಗೆ ಟೆಂಡರ್ ಫೈನಲ್ ಆಗಿದ್ದು, ಏಳು ವರ್ಷಗಳ ಕಾಲ ಹಸಿರು ಮಾರ್ಗದ 10 ರೈಲು ಮತ್ತು ನೇರಳೆ ಮಾರ್ಗದ 10 ರೈಲಿನ ಮೇಲೆ ಜಾಹೀರಾತು ಹಾಕಲು ಅವಕಾಶ ನೀಡಲಾಗಿದೆ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಸಂಚಾರ ಮಾಡುವ 57 ರೈಲುಗಳ ಒಳಭಾಗದಲ್ಲೂ ಜಾಹೀರಾತು ಹಾಕಲು ಅನುಮತಿ ನೀಡಲಾಗಿದೆ ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.
20 ರೈಲಿನ ಹೊರಭಾಗದಲ್ಲಿ ಮತ್ತು 57 ರೈಲಿನ ಒಳಭಾಗದಲ್ಲಿ ಜಾಹೀರಾತು ಅಳವಡಿಸುವುದರಿಂದ ಬಿಎಂಆರ್ಸಿಎಲ್ಗೆ ವರ್ಷಕ್ಕೆ 27 ಕೋಟಿ ರೂಪಾಯಿ ಆದಾಯ ಹರಿದು ಬರಲಿದೆ ಎಂದು ತಿಳಿದು ಬಂದಿದೆ.
ಜಾಹೀರಾತು ಹಾಕಲು ಮುಂದಾಗಿರುವ ಬಿಎಂಆರ್ಸಿಎಲ್ ನಿರ್ಧಾರಕ್ಕೆ ಮೆಟ್ರೋ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ ಏರಿಕೆ ಮಾಡಿರುವುದರಿಂದ ಶೇ 50 ರಷ್ಟು ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಟಿಕೆಟ್ ದರ ಕಡಿಮೆ ಮಾಡಿದರೆ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುತ್ತದೆ. ಮೆಟ್ರೋಗೂ ಆದಾಯ ಬರುತ್ತದೆ ಎಂದರು.

ಇದನ್ನು ಓದಿ:

https://infomindz.in/netravathi-peakkelabagadalli-kaligichu-nuraru-yekre-aanya-nasa-athanka/
Prev Post

ಲವ್ ಕೇಸಿಗೆ ಮಗಳ ಆತ್ಮಹತ್ಯೆ: ಮನನೊಂದ ತಾಯಿ ಆತ್ಮಹತ್ಯೆ

Next Post

ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ: ಸಿಎಂ ಸಂತಸ

post-bars

Leave a Comment

Related post