Back To Top

 ನಿರೀಕ್ಷಿತ ಅಂಕ ಪಡೆಯದ ಮಕ್ಕಳನ್ನು ನೀರಿನ ಬಕೆಟ್ನಲ್ಲಿ ಮುಳುಗಿಸಿ ಕೊಂದ ಅಪ್ಪ ನೇಣಿಗೆ ಶರಣು

ನಿರೀಕ್ಷಿತ ಅಂಕ ಪಡೆಯದ ಮಕ್ಕಳನ್ನು ನೀರಿನ ಬಕೆಟ್ನಲ್ಲಿ ಮುಳುಗಿಸಿ ಕೊಂದ ಅಪ್ಪ ನೇಣಿಗೆ ಶರಣು

ಚಂದ್ರಕಿಶೋರ್‌ ಎಂಬಾತ ಮಕ್ಕಳಿಬ್ಬರ ಕೈಕಾಲುಗಳನ್ನು ಕಟ್ಟಿ ಅವರ ತಲೆಗಳನ್ನು ನೀರು ತುಂಬಿದ ಬಕೆಟ್‌ಗಳಲ್ಲಿ ಮುಳುಗಿಸಿ ಕೊಂದಿದ್ದಾನೆ. ಸರಿಯಾಗಿ ಓದುತ್ತಿಲ್ಲವೆಂದು ತನ್ನ ಮಕ್ಕಳನ್ನ ನೀರಿನಲ್ಲಿ ಮುಳುಗಿಸಿ ಕೊಂದು ತಂದೆಯೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆಂಧ್ರ ಪ್ರದೇಶ: ಚಂದ್ರಕಿಶೋರ್‌ ಎಂಬಾತ ಮಕ್ಕಳಿಬ್ಬರ ಕೈಕಾಲುಗಳನ್ನು ಕಟ್ಟಿ ಅವರ ತಲೆಗಳನ್ನು ನೀರು ತುಂಬಿದ ಬಕೆಟ್‌ಗಳಲ್ಲಿ ಮುಳುಗಿಸಿ ಕೊಂದಿದ್ದಾನೆ. ಸರಿಯಾಗಿ ಓದುತ್ತಿಲ್ಲವೆಂದು ತನ್ನ ಮಕ್ಕಳನ್ನ ನೀರಿನಲ್ಲಿ ಮುಳುಗಿಸಿ ಕೊಂದು ತಂದೆಯೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಪ್ರತೀ ಬಾರಿಯೂ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದುಕೊಳ್ಳುತ್ತಿದ್ದ ಮಕ್ಕಳನ್ನ ಕಂಡು ಚಿಂತೆಗೀಡಾಗಿದ್ದ ತಂದೆ ಈ ನಿರ್ಧಾರಕ್ಕೆ ಬಂದಿದ್ದಾಗಿ ಡೆತ್‌ನೋಟಿನಲ್ಲಿ ಬರೆದಿದ್ದಾನೆ.

66

ಕಾಕಿನಾಡ ಜಿಲ್ಲೆಯ ಸರ್ಪವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಭೀಕರ ನಡೆದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿ ಮೂಲದ ವನಪಲ್ಲಿ ಚಂದ್ರಕಿಶೋರ್ ಸ್ಥಳೀಯ ONGC ಕಚೇರಿಯಲ್ಲಿ ಸಹಾಯಕ ಲೆಕ್ಕಪತ್ರಗಾರರಾಗಿ ಕೆಲಸ ಮಾಡುತ್ತಿದ್ದ. ಮಕ್ಕಳು ಪ್ರತಿಸಾರಿಯೂ ಪರೀಕ್ಷೆಯಲ್ಲಿ ಪಡೆಯುತ್ತಿದ್ದ ಅಂಕಗಳನ್ನು ಕಂಡು ಅಸಮಾಧಾನಗೊಂಡಿದ್ದ. ಇದೇ ವಿಚಾರವಾಗಿ ಮನೆಯಲ್ಲಿ ಅನೇಕ ಬಾರಿ ಗಲಾಟೆಯೂ ನಡೆದಿತ್ತು.

hhfkfkfff

ಹೋಳಿ ಹಬ್ಬದ ಸಂದರ್ಭದಲ್ಲಿ ಚಂದ್ರಕಿಶೋರ್ ತಮ್ಮ ಪತ್ನಿ ತನುಜಾ, ಇಬ್ಬರು ಪುತ್ರರಾದ ಜೋಶಿಲ್ ಮತ್ತು ನಿಖಿಲ್‌ರೊಂದಿಗೆ ತಮ್ಮ ಕಚೇರಿಗೆ ಹೋಗಿದ್ದರು. ನಂತರ ಸಮವಸ್ತ್ರದ ಅಳತೆ ತೆಗೆದುಕೊಳ್ಳಲು ಟೈಲರ್ ಬಳಿ ಮಕ್ಕಳನ್ನ ಕರೆದೊಯ್ಯುತ್ತಿರುವುದಾಗಿ ಪತ್ನಿಗೆ ತಿಳಿಸಿ ಕಚೇರಿಯಲ್ಲಿಯೇ ಇರುವಂತೆ ಹೇಳಿದ್ದನಂತೆ. ಆದರೆ ಆತ ಇಬ್ಬರು ಮಕ್ಕಳನ್ನು ನೇರ ಮನೆಗೆ ಕರೆದುಕೊಂಡು ಹೋಗಿದ್ದಾನೆ.
ಇಬ್ಬರ ಕೈಕಾಲುಗಳನ್ನು ಕಟ್ಟಿದ್ದ ಚಂದ್ರಕಿಶೋರ್‌ ಅವರ ತಲೆಗಳನ್ನು ನೀರು ತುಂಬಿದ ಬಕೆಟ್‌ಗಳಲ್ಲಿ ಮುಳುಗಿಸಿ ಕೊಂದಿದ್ದಾನೆ. ಮಕ್ಕಳನ್ನ ಕೊಂದ ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತಿ ಬಹಳ ಸಮಯವಾದರೂ ಹಿಂತಿರುಗದ ಕಾರಣ ತನುಜಾ ತನ್ನ ಸಹೋದ್ಯೋಗಿಗಳೊಂದಿಗೆ ಮನೆಗೆ ಹೋಗಿದ್ದಾಳೆ. ಕಿಟಕಿಯಿಂದ ಮನೆಯೊಳಗೆ ನೋಡಿದಾಗ ಪತಿ ಮತ್ತು ಮಕ್ಕಳು ಸಾವನ್ನಪ್ಪಿರುವುದು ಕಂಡುಬಂದಿದೆ.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ:

https://infomindz.in/yaksha-kala-varade/
Prev Post

BMTC ಬಸ್ ನಲ್ಲಿ ಕೈ ಚಳಕ ತೋರುತಿದ್ದ ಕಿಲಾಡಿ ಕಳ್ಳಿಯರನ್ನು ಹಿಡಿದ ಚಾಲಕಿ…

Next Post

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ವಿಶೇಷ ಪೂಜೆ ನಡೆಸಿದ ಬಾಲಿವುಡ್‌ ನಟಿ ಕತ್ರಿನಾ…

post-bars

Leave a Comment

Related post