ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ನಕ್ಸಲರು ಸಾವು
ಶನಿವಾರ ಬೆಳಿಗ್ಗೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ನಕ್ಸಲರು ಸಾವನ್ನಪ್ಪಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಛತ್ತೀಸಗಢ: ಶನಿವಾರ ಬೆಳಿಗ್ಗೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ನಕ್ಸಲರು ಸಾವನ್ನಪ್ಪಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳನ್ನು ಒಳಗೊಂಡ ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿ ಹೇಳಿದರು.
ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಕೆರ್ಲಾಪಾಲ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ನಕ್ಸಲ್ ಎನ್‌ಕೌಂಟರ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಎನ್‌ಕೌಂಟರ್ ಸ್ಥಳದಿಂದ 2 ಎಕೆ -47 ಮತ್ತು ಇತರ ದೇಶೀಯ ಶಸ್ತ್ರಾಸ್ತ್ರಗಳು ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಸುಕ್ಮಾದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಾರ್ಚ್ 20 ರಂದು, ಛತ್ತೀಸ್‌ಗಢದ ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಭದ್ರತಾ ಪಡೆಗಳು ಕ್ರಮವಾಗಿ ಕನಿಷ್ಠ 30 ನಕ್ಸಲರನ್ನು ಹತ್ಯೆಗೈದವು. ಬಿಜಾಪುರದಲ್ಲಿ ಎನ್‌ಕೌಂಟರ್ ನಡೆದ ಸ್ಥಳದಲ್ಲಿ 26 ಶವಗಳು ಪತ್ತೆಯಾಗಿದ್ದರೆ, ಕಂಕೇರ್‌ನಲ್ಲಿ 4 ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ದಿನ, ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಪ್ರತ್ಯೇಕ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಕೊಂದವು.
ಇದನ್ನು ಓದಿ: