ಅಕ್ರಮ ಸಂಬಂಧದ ಶಂಕೆ: ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಪತಿ
ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಗಂಡನೇ ತನ್ನ ಹೆಂಡತಿಯನ್ನು ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ನಗರದಲ್ಲಿ ಜರುಗಿದೆ.

ಬೆಂಗಳೂರು: ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಗಂಡನೇ ತನ್ನ ಹೆಂಡತಿಯನ್ನು ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ನಗರದಲ್ಲಿ ಜರುಗಿದೆ. 35 ವರ್ಷದ ಶಾರದ ಮೃತ ಪತ್ನಿ. ನಡು ರಸ್ತೆಯಲ್ಲಿ ಪತ್ನಿಗೆ ಚಾಕುವಿನಿಂದ ಕುತ್ತಿಗೆ ಕುಯ್ದು ಪತಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗ್ನೇಯ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಸೋಕೋ ಟೀಂ ಆಗಮಿಸಿದೆ. ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಪತ್ನಿ ಕೆಲಸ ಮುಗಿಸಿ ನಿರ್ಜನ ರಸ್ತೆಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪತಿ ದಾಳಿ ನಡೆಸಿದ್ದಾನೆ. ಆರೋಪಿ ಪತ್ನಿಯನ್ನು ಕೊಲ್ಲಲು ಎರಡು ಚಾಕು ತಂದಿದ್ದ. ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗುತ್ತಿದ್ದ ಆರೋಪಿ ಪತಿಯನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.