Back To Top

 ಭೀಕರ ಅಪಘಾತ: ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ, ಐವರ ಸಾವು
April 7, 2025

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ, ಐವರ ಸಾವು

ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ.

ಕಲಬುರಗಿ : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ.
ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ.ಇಂದು ನಸುಕಿನಜಾವ ಈ ಅಪಘಾತ ಸಂಭವಿಸಿದೆ.
ಮ್ಯಾಕ್ಸಿಕ್ಯಾಬ್ ನಲ್ಲಿ ಸುಮಾರು 31 ಮಂದಿ ಪ್ರಯಾಣಿಸುತ್ತಿದ್ದರು, ವೇಗವಾಗಿ ಬರುತ್ತಿದ್ದ ಮ್ಯಾಕ್ಸಿಕ್ಯಾಬ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೃತರೆಲ್ಲರೂ ಬಾಗಲಕೋಟೆ ಮೂಲದವರು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.ವಾಜೀದ್, ಮೆಹಬೂಬಿ, ಪ್ರಿಯಾಂಕಾ ಸೇರಿ ಐವರು ಮೃತಪಟ್ಟಿದ್ದಾರೆ.

Prev Post

ಇನ್ಶೂರೆನ್ಸ್ ಹಣ ಪಡೆಯಲು ವ್ಯಕ್ತಿಯೊಬ್ಬ ಬದುಕಿರುವ ಮಗನನ್ನು ಸತ್ತಿದ್ದಾನೆಂದು ನಾಟಕ

Next Post

ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ

post-bars

Leave a Comment

Related post