Back To Top

 ಇನ್‌ಸ್ಟಾ ಲವ್ : 13 ವರ್ಷ ಸಂಸಾರ ಮಾಡಿದ ಗಂಡನನ್ನು ಬಿಟ್ಟು ಓಡಿದ ಪತ್ನಿ

ಇನ್‌ಸ್ಟಾ ಲವ್ : 13 ವರ್ಷ ಸಂಸಾರ ಮಾಡಿದ ಗಂಡನನ್ನು ಬಿಟ್ಟು ಓಡಿದ ಪತ್ನಿ

ಮದುವೆಯಾಗಿ 13 ವರ್ಷದ ನಂತರ ಇನ್‌ಸ್ಟಾದಲ್ಲಿ ಪರಿಚಯವಾದವನೊಂದಿಗೆ ಪತ್ನಿ ಎಸ್ಕೇಪ್ ಆಗಿ, ಎರಡನೇ ಮದುವೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ (Nelamangala) ನಡೆದಿದೆ.

silhouette angry husband wife clash 600nw 2350185639

ನೆಲಮಂಗಲ: ಮದುವೆಯಾಗಿ 13 ವರ್ಷದ ನಂತರ ಇನ್‌ಸ್ಟಾದಲ್ಲಿ ಪರಿಚಯವಾದವನೊಂದಿಗೆ ಪತ್ನಿ ಎಸ್ಕೇಪ್ ಆಗಿ, ಎರಡನೇ ಮದುವೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ (Nelamangala) ನಡೆದಿದೆ.
ನೇತ್ರಾವತಿ ಜಕ್ಕಸಂದ್ರದ ರಾಘವೇಂದ್ರನಗರ ನಿವಾಸಿಯಾದ ರಮೇಶ್ ಎಂಬುವವರನ್ನು ಮದುವೆಯಾಗಿ 13 ವರ್ಷವಾಗಿತ್ತು. ಒಬ್ಬ ಮಗ ಕೂಡ ಇದ್ದಾನೆ.
ಕಳೆದ 1 ವಾರದ ಹಿಂದೆ ಇನ್‌ಸ್ಟಾದಲ್ಲಿ ನೇತ್ರಾವತಿಗೆ ಸಂತೋಷ್ ಎಂಬಾತನ ಪರಿಚಯವಾಗಿತ್ತು. ಈ ಪರಿಚಯವು ಪ್ರೀತಿಗೆ ತಿರುಗಿತ್ತು. ನೇತ್ರಾವತಿಯು ಕೆಲವೇ ದಿನಗಳ ಪ್ರೀತಿಗಾಗಿ ಮೊದಲ ಪತಿಗೆ ಕೈಕೊಟ್ಟು, ಸಂತೋಷ್ ಜೊತೆ ದೇವಾಲಯಲ್ಲಿ ಎರಡನೇ ಮದುವೆಯಾಗಿದ್ದಾಳೆ.
ಸಾಮಾಜಿಕ ಜಾಲತಾಣದಲ್ಲಿ ಈ ಮದುವೆಯ ವೀಡಿಯೋವನ್ನು ನೋಡಿ ಮೊದಲ ಪತಿ ಶಾಕ್ ಆಗಿದ್ದಾರೆ.
ಪೊಲೀಸರ ಭದ್ರತೆಯಲ್ಲಿ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನ ತೆಗೆದುಕೊಂಡು ಹೋಗಲು ಮನೆ ಬಳಿ ಬಂದ ನೇತ್ರಾವತಿಗೆ ಸ್ಥಳೀಯರು ಕ್ಲಾಸ್ ತೆಗೆದುಕೊಂಡಿದ್ದಾರೆ.
ನೇತ್ರಾವತಿ ವಿರುದ್ಧ ನೆಲಮಂಗಲ ಟೌನ್ ಪೋಲೀಸ್ ಠಾಣೆಯಲ್ಲಿ (Nelamangala Town Police Station) ಪ್ರಕರಣ ದಾಖಲಾಗಿದ್ದು, ಪತಿ ಹಾಗೂ ಆತನ ಕುಟುಂಬ ದೂರು ನೀಡಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ನೇತ್ರಾವತಿಯು ಪತಿ ಕುಡಿದು ಹೊಡೆಯುತ್ತಾನೆ ಎಂದು ದೂರು ನೀಡಿ, ಪತಿಯನ್ನು ಮನೆಯಿಂದ ಹೊರಗೆ ಹಾಕಿರುವ ವಿಷಯವೂ ಬೆಳಕಿಗೆ ಬಂದಿದೆ‌.

ಇದನ್ನು ಓದಿ:

https://infomindz.in/petor-and-disel-malina-abukari-sunka-hecchala/
Prev Post

ಆರ್‌ಸಿಬಿ ರೋಚಕ ಗೆಲುವು: ಸಿಟ್ಟಿಗೆದ್ದ ನೀತಾ ಅಂಬಾನಿ

Next Post

ಪತ್ನಿಯ ಪ್ರಿಯಕರನನ್ನು ಕೊಂದ ಪತಿ ಬಂಧನ

post-bars

Leave a Comment

Related post