Back To Top

 ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜು
April 14, 2025

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜು

ಡೀಸೆಲ್‌ ದರ ಹಾಗೂ ಟೋಲ್‌ ಶುಲ್ಕ ಹೆಚ್ಚಳ ವಿರೋಧಿಸಿ, ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಎ.14 ಅಂದರೆ ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ.

hhhhhhh

ಬೆಂಗಳೂರು: ಡೀಸೆಲ್‌ ದರ ಹಾಗೂ ಟೋಲ್‌ ಶುಲ್ಕ ಹೆಚ್ಚಳ ವಿರೋಧಿಸಿ, ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಎ.14 ಅಂದರೆ ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ.
ಈ ಕುರಿತು ಜಿ.ಆರ್‌. ಷಣ್ಮುಖಪ್ಪ ಮಾತನಾಡಿ, ಏ.14 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಈಗಾಗಲೇ ಕರೆ ನೀಡಲಾಗಿದೆ.
ಹೊರ ರಾಜ್ಯಗಳ ಲಾರಿ ಮಾಲೀಕರು ಸೇರಿದಂತೆ ರಾಜ್ಯವ್ಯಾಪಿ ಬೆಂಬಲಿಸಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ. ಕೆಲ ಬಣದ ನಾಯಕರು ಸರ್ಕಾರದೊಟ್ಟಿಗೆ ಕೈಜೋಡಿಸಿದ್ದು ವಿರೋಧ ಮಾಡುತ್ತಿದ್ದಾರೆ. ಈಗಾಗಲೇ ಹಲವು ಪೆಟ್ರೋಲ್‌ ಬಂಕ್‌ ಸಂಘಟನೆಗಳು ಸೇರಿದಂತೆ ರಾಜ್ಯವ್ಯಾಪಿ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಹಾಗಾಗಿ ಮುಷ್ಕರ ನಡೆಸುವುದು ನಿಶ್ಚಿತ ಎಂದು ಹೇಳಿದರು.
ಅಲ್ಲದೇ ನಾಳೆಯಿಂದ ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಲಾರಿಗಳಿದ್ದು ಮುಷ್ಕರಕ್ಕೆ ಬೆಂಬಲಿಸುವ ಮೂಲಕ ಸಂಚಾರವನ್ನು ಸ್ಥಗಿತಗೊಳಿಸಲಿವೆ. ಹೊರರಾಜ್ಯಗಳಿಂದಲೂ ಲಾರಿಗಳು ಬರಲು ಬಿಡುವುದಿಲ್ಲ ಅಂದು ವಾಣಿಜ್ಯ ಸೇರಿದಂತೆ ಎಲ್ಲ ಮಾದರಿಯ ಸರಕು ಸೇವೆಗಳು ಸ್ತಬ್ಧಗೊಳ್ಳಲಿವೆ ಎಂದರು.
ಪೆಟ್ರೋಲಿಯಂ ಅಸೋಸಿಯೇಷನ್, ಗ್ಯಾಸ್ ವಾಹನಗಳು ಹಾಗೂ ಆಯಸಿಡ್ ವಾಹನಗಳು, ಅಕ್ಕಿ ಹಾಗೂ ತರಕಾರಿ ಮಾರುವ ವಾಹನ ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ಬಂದ್ ಇರಲಿದೆ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಮಾಹಿತಿ ನೀಡಿದ್ದಾರೆ.

Prev Post

ಮಲಪ್ರಭಾ ನದಿಯಲ್ಲಿ ಮುಳುಗಿ ಭಾರತೀಯ ಸೇನೆಯ ಯೋಧ ಸೇರಿ ಇಬ್ಬರು ಸಾವು

Next Post

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

post-bars

Leave a Comment

Related post