Back To Top

 ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು

ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ.

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ. ಕಳೆದ ಎರಡು ಮೂರು ತಿಂಗಳಿಂದ ಕುಮಾರಸ್ವಾಮಿ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು, ಕೆಮ್ಮು ಕಡಿಮೆಯಗೌತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಎಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಜಿಂದಾಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅಪೋಲೋ ಆಸ್ಪತ್ರೆಯಲ್ಲಿಯೂ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ವೈದ್ಯರ ಸಲಹೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಎರಡು ವಾರಗಳ ಕಾಲ ವಿದೇಶದಲ್ಲಿ ಚಿಕಿತ್ಸೆ ಪಡೆಯುವ ಅವಶ್ಯಕತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳುವ ಸಾಧ್ಯತೆ ದಟ್ಟವಾಗಿದೆ.

Prev Post

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಶೂಟೌಟ್

Next Post

ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬದಿರಿ: ಸಿಎಂ ಸಿದ್ದರಾಮಯ್ಯ

post-bars

Leave a Comment

Related post