ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏ.27ರ ಬಳಿಕ ಮಳೆ ಪ್ರಮಾಣ ಹೆಚ್ಚಳ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಮಳೆ(Rain)ಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಮಳೆ(Rain)ಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹುಕ್ಕೇರಿ, ಕಾರ್ಕಳ, ಬೆಳಗಾವಿ, ನಿಪ್ಪಾಣಿ, ಕಮ್ಮರಡಿ, ಆನವಟ್ಟಿ, ಜಯಪುರ, ರಾಯ್ಭಾಗ್, ಧಾರವಾಡ, ಕಲಘಟಗಿ, ಬೈಲಹೊಂಗಲ, ಹಿಡಕಲ್, ಹುಬ್ಬಳ್ಳಿ, ಚಿಕ್ಕೋಡಿ, ನಾಪೋಕ್ಲು, ಶೃಂಗೇರಿಯಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 43.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ. ಎಚ್ಎಎಲ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೀದರ್ನಲ್ಲಿ 42.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ವಿಜಯಪುರದಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ಬಾಗಲಕೋಟೆಯಲ್ಲಿ 38.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 43.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.