Back To Top

 ಬೇಸಿಗೆ ಮಳೆ ನಾಳೆಯಿಂದ ಮತ್ತೆ ಆರಂಭ: ಹವಾಮಾನ ಇಲಾಖೆ ಮುನ್ಸೂಚನೆ
April 27, 2025

ಬೇಸಿಗೆ ಮಳೆ ನಾಳೆಯಿಂದ ಮತ್ತೆ ಆರಂಭ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಕೆಲ ದಿನಗಳ ಕಾಲ ವಿರಾಮ ನೀಡಿದ್ದ ಬೇಸಿಗೆ ಮಳೆ ನಾಳೆಯಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳ ಕಾಲ ವಿರಾಮ ನೀಡಿದ್ದ ಬೇಸಿಗೆ ಮಳೆ ನಾಳೆಯಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇಂದು ಕೊಡಗು ಹಾಗೂ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.30 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಏ.30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Prev Post

ಪಹಲ್ಗಾಮ್‌ ದಾಳಿ: ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯೆ

Next Post

ಪಹಲ್ಗಾಮ್‌ನಲ್ಲಿ ದಾಳಿ ತನಿಖೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ

post-bars

Leave a Comment

Related post