Back To Top

 ಚೀನಾ ನಿರ್ಮಿತ ಪಾಕ್‌ನ JF-17 ವಿಮಾನವನ್ನು ಹೊಡೆದು ಹಾಕಿದ ಭಾರತ
May 7, 2025

ಚೀನಾ ನಿರ್ಮಿತ ಪಾಕ್‌ನ JF-17 ವಿಮಾನವನ್ನು ಹೊಡೆದು ಹಾಕಿದ ಭಾರತ

ನವದೆಹಲಿ: ಮಿಡ್‌ನೈಟ್‌ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು ಭಾರತ ಹೊಡೆದು ಹಾಕಿದೆ.
ಚೀನಾ ನಿರ್ಮಿತ ಜೆಎಫ್‌-17 ಯುದ್ಧ ವಿಮಾನ ಭಾರತದ (India) ದಾಳಿಯನ್ನು ತಡೆಯಲು ಬಂದಿತ್ತು. ಈ ಸಂದರ್ಭದಲ್ಲಿ ಭಾರತ ಕ್ಷಿಪಣಿಯನ್ನು ಹಾರಿಸಿ ಬೀಳಿಸಿದೆ ಎಂದು ವರದಿಯಾಗಿದೆ. ಈ ವಿಚಾರದ ಬಗ್ಗೆ ಇಲ್ಲಿಯವರೆಗೆ ಭಾರತ ಸೇನೆ ಅಧಿಕೃತವಾಗಿ ತಿಳಿಸಿಲ್ಲ.
ಜೆಎಫ್‌ 17 ಚೀನಾ (China) ನಿರ್ಮಿತ ಯುದ್ಧ ವಿಮಾನವಾಗಿದೆ. ಪಾಕಿಸ್ತಾನದ ಬಳಿ 150 ಜೆಎಫ್‌ 17 ವಿಮಾನಗಳಿವೆ. ಈ ಹಿಂದೆ ಅಭಿನಂದನ್‌ ವರ್ಧಮಾನ್‌ ಅವರು ಅಮೆರಿಕದ ಎಫ್‌ 16 ಯುದ್ಧ ವಿಮಾನ ಹೊಡೆದು ಹಾಕಿದ್ದರು.
2019 ರಲ್ಲಿ ಏನಾಗಿತ್ತು?
2019ರ ಫೆ. 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಎಫ್‌ ಯೋಧರಿದ್ದ ಬಸ್ಸಿನ ಮೇಲೆ ಜೈಷ್ ಉಗ್ರನೊಬ್ಬ ಆತ್ಮಾಹುತಿ ದಾಳಿ ನಡೆಸಿದ್ದ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ವಾಯು ಪಡೆ ಪಾಕಿಸ್ತಾನದ ಬಾಲಕೋಟ್‍ನಲ್ಲಿ ಜೈಷ್ ಉಗ್ರರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ನಡೆಸಿ ಉಗ್ರರನ್ನು ಸದೆಬಡೆದಿತ್ತು.
ಬಾಲಾಕೋಟ್ ಏರ್ ಸ್ಟ್ರೈಕ್ ನಂತರ ಪಾಕಿಸ್ತಾನ ಫೆ.27 ರಂದು ತನ್ನ ಎಫ್-16 ಯುದ್ಧ ವಿಮಾನದ ಮೂಲಕ ಭಾರತವನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಿದ ಸಂದರ್ಭದಲ್ಲಿ ಅಭಿನಂದನ್ ಮಿಗ್-21 ವಿಮಾನದ ಮೂಲಕ ಪಾಕ್ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅಭಿನಂದನ್ ಅವರ ಮಿಗ್-21 ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪತನಗೊಂಡಿತ್ತು. ಆಗ ಸುಮಾರು 58 ಗಂಟೆಗಳ ಕಾಲ ಅಭಿನಂದನ್ ಪಾಕಿಸ್ತಾನದ ಕಸ್ಟಡಿಯಲ್ಲೇ ಇದ್ದರು. ನಂತರ ಕೇಂದ್ರ ಸರ್ಕಾರ ಪಾಕ್ ಮೇಲೆ ಒತ್ತಡ ಹೇರಿ ಅಭಿನಂದನ್ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿತ್ತು.

Prev Post

ಬಿಎಂಟಿಸಿ ಬಸ್ ನಲ್ಲಿ ಮಹಿಳೆಗೆ ಮುಸ್ಲಿಂ ವೃದ್ಧನಿಂದ ಲೈಂಗಿಕ ಕಿರುಕುಳ

Next Post

ಭಾರತದ ವಿರುದ್ಧ ಪ್ರತಿದಾಳಿಗೆ ಪಾಕ್‌ ಕುತಂತ್ರ: ಸೇನೆಗೆ ಪರಮಾಧಿಕಾರ ನೀಡಿದ ಪ್ರಧಾನಿ ಶೆಹಬಾಜ್…

post-bars

Leave a Comment

Related post