ಹಾಂಕಾಂಗ್, ಸಿಂಗಾಪುರದಲ್ಲಿ ಮತ್ತೆ ಕೋವಿಡ್: ಭಾರತಕ್ಕೂ ಕಾಲಿಟ್ಟ ಮಹಾಮಾರಿ
2019ರಲ್ಲಿ ಸಮುದ್ರದ ಅಲೆಯಂತೆ ಜಗತ್ತಿಗೆ ಅಪ್ಪಳಿಸಿದ ಕೋವಿಡ್ ಮಹಾಮಾರಿ ಅದೆಷ್ಟೋ ಜೀವಗಳನ್ನು ಬಲಿತೆಗೆದುಕೊಂಡಿತ್ತು. 3 ವರ್ಷಗಳ ಕಾಲ ಜಗತ್ತನ್ನು ಕಾಡಿದ್ದ ಕೋವಿಡ್ -19 ಮತ್ತೊಮ್ಮೆ ಏಷ್ಯಾದ ಕೆಲವು ಭಾಗಗಳಲ್ಲಿ ವೇಗವಾಗಿ ಹರಡುತ್ತಿದೆ. ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಾಗುತ್ತಿದೆ.
ಬೆಂಗಳೂರು: 2019ರಲ್ಲಿ ಸಮುದ್ರದ ಅಲೆಯಂತೆ ಜಗತ್ತಿಗೆ ಅಪ್ಪಳಿಸಿದ ಕೋವಿಡ್ ಮಹಾಮಾರಿ ಅದೆಷ್ಟೋ ಜೀವಗಳನ್ನು ಬಲಿತೆಗೆದುಕೊಂಡಿತ್ತು. 3 ವರ್ಷಗಳ ಕಾಲ ಜಗತ್ತನ್ನು ಕಾಡಿದ್ದ ಕೋವಿಡ್ -19 ಮತ್ತೊಮ್ಮೆ ಏಷ್ಯಾದ ಕೆಲವು ಭಾಗಗಳಲ್ಲಿ ವೇಗವಾಗಿ ಹರಡುತ್ತಿದೆ. ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಾಗುತ್ತಿದೆ. ವಿಶೇಷವಾಗಿ ಹಾಂಕಾಂಗ್ ಮತ್ತು ಸಿಂಗಾಪುರದಂತಹ ಹಣಕಾಸು ಪ್ರಮುಖ ದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಇದರಿಂದ ಎಚ್ಚೆತ್ತ ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಇದು ಹೊಸ ಅಲೆ ಎಂದು ದೃಢಪಡಿಸಿದ್ದಾರೆ. ಇದೀಗ ಈ ಮಹಾಮಾರಿ ಭಾರತಕ್ಕೂ ಕಾಲಿಟ್ಟಿದೆ. ಹಾಗಿದ್ರೆ ಏನಿದು ಕೋವಿಡ್ ಹೊಸ ರೂಪ? ಭಾರತದಲ್ಲಿ ಇಲ್ಲಿವರೆಗೆ ದಾಖಲಾದ ಪ್ರಕರಣಗಳೆಷ್ಟು? ಈ ಬಗ್ಗೆ ತಜ್ಞರು ಹೇಳೋದೇನು ಎಂಬ ಕುರಿತು ಇಲ್ಲಿ ವಿವರಿಸಲಾಗಿದೆ.
ಹಾಂಕಾಂಗ್, ಥಾಯ್ಲೆಂಡ್, ಸಿಂಗಾಪುರ, ಚೀನಾ ಸೇರಿದಂತೆ ಏಷ್ಯಾದ ಕೆಲ ರಾಷ್ಟ್ರಗಳಲ್ಲಿ ಕೋವಿಡ್ ಸ್ಫೋಟಗೊಂಡಿದೆ. ಪ್ರತಿ ದಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಆತಂಕದ ಬೆನ್ನಲ್ಲೇ ಕ್ರಿಕೆಟರ್ ಟ್ರಾವಿಸ್ ಹೆಡ್ ಹಾಗೂ 18ನೇ ಆವೃತ್ತಿ ಬಿಗ್ ಬಾಸ್ ಖ್ಯಾತಿಯ ಶಿಲ್ಪಾ ಶಿರೋಡ್ಕರ್ ಒಳಗೊಂಡಂತೆ ಅನೇಕರಲ್ಲಿ ಕೋವಿಡ್ ವೈರಸ್ ಕಾಣಿಸಿಕೊಂಡಿದೆ. ಪ್ರಸ್ತುತ ಭಾರತದಲ್ಲಿ 257 ಕೋವಿಡ್ ಪ್ರಕರಣಗಳು ದಾಖಲಾಗಿದೆ. ಕಳೆದ ಕೆಲವು ವಾರಗಳಲ್ಲಿ ಸಿಂಗಾಪುರ ಮತ್ತು ಹಾಂಗ್ ಕಾಂಗ್ನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ನಂತರ ಭಾರತವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಭಾರತದಲ್ಲಿರುವ ಬಹುತೇಕ ಪ್ರಕರಣಗಳು ಸೌಮ್ಯವಾಗಿವೆ, ತೀವ್ರವಾಗುವ ಯಾವ ಲಕ್ಷಣಗಳೂ ಗೋಚರಿಸುವುದಿಲ್ಲ. ದೇಶದ ದೊಡ್ಡ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಆಲೋಚಿಸಿದರೆ ಭಾರತದಲ್ಲಿ ಪ್ರಸ್ತುತ ಪ್ರಕರಣಗಳ ಸಂಖ್ಯೆ ತೀರಾ ಕಡಿಮೆ. ಈ ಎಲ್ಲಾ ಪ್ರಕರಣಗಳು ಸೌಮ್ಯವಾಗಿದ್ದು, ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.
ಇದನ್ನು ಓದಿ: