Back To Top

May 21, 2025

ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಬಂಧನ

ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ.

ನವದೆಹಲಿ: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಆಕೆ ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಳಂತೆ. ಆದರೆ ಪಾಕಿಸ್ತಾನಕ್ಕೆ ಹೋದರೆ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ. ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ ಕಾರಣಕ್ಕೆ ಆಕೆಗೆ ವಿಐಪಿ ಸುಲಭ್ಯ ದೊರೆಯುತ್ತಿತ್ತು ಎಂದು ವಿಚಾರಣೆ ವೇಳೆ ಆಕೆಯೇ ಬಾಯ್ಬಿಟ್ತಿದ್ದಾಳೆ ಎನ್ನಲಾಗಿದೆ. ಅಲ್ಲದೇ ಜ್ಯೋತಿ ಮಲ್ಹೋತ್ರಾ ಪಾಕಿಸ್ತಾನದಲ್ಲಿ ಹೈ ಪ್ರೊಫೈಲ್ ಪಾರ್ಟಿಗಳಿಗೆ ಹಾಜರಾಗುತ್ತಿದ್ದಳು. ಗುಪ್ತಚರ ಸಂಸ್ಥೆಗಳಲ್ಲದೇ ಇತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗುತ್ತಿದ್ದಳು ಎಂದು ತಿಳಿದುಬಂದಿದೆ.

ನೇಪಾಳಕ್ಕೆ ಭೇಟಿ ನೀಡಿದ್ದ ಜ್ಯೋತಿ ಪಾಕಿಸ್ತಾನ ರಾಯಭರ ಕಚೇರಿಗೆ ಹೋಗಿದ್ದಳು. ಇಫ್ತಾರ್ ಕೂಟದಲ್ಲಿ ಭಾಗಿಯಾಗಿ ಅಲ್ಲಿಂದ ವಿಡಿಯೋ ಮಾಡಿ ತನ್ನ ಯೂಟ್ಯೂಬ್ ಚಾನಲ್ ಗೆ ಅಪ್ ಲೋಡ್ ಮಾಡಿದ್ದಳು. ಪಾಕಿಸ್ತಾನ ರಾಯಭಾರ ಕಚೇರಿಗೆ ಆಕೆ ಭೇಟಿ ಕೊಟ್ಟಾಗ ಡ್ಯಾನಿಶ್ ತುಂಬಾ ಸ್ನೇಹಪರ ವ್ಯಕ್ತಿಯಂತೆ ಆಕೆನ್ನು ಸ್ವಾಗತಿಸಿದ್ದ. ಇನ್ನು ಜ್ಯೋತಿ ಮಲ್ಹೋತ್ರಾ ಜನವರಿ 2025ರಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್ ಗೂ ಭೇಟಿ ನೀಡಿದ್ದಳು. ಪಹಲ್ಗಾಮ್ ಗೆ ಯಾವ ಮಾರ್ಗವಾಗಿ ಬರಬೇಕು? ಬಳಿಕ ಎಲ್ಲಿಗೆ ಭೇಟಿ ನೀಡಬೇಕು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಜ್ಯೋತಿ ತನ್ನ ಯೂಟ್ಯೂಬ್ ಚಾನಲ್ ನಲ್ಲಿ ವಿವರಿಸಿದ್ದಳು. ಪಹಲ್ಗಾಮ್, ಆರುಬೆತಾಪ್, ಚಂದನ್ ವಾಡಿಗಳಿಗೆ ಭೇಟಿ ನೀಡಿ ಅಲ್ಲಿನ ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಿ ವಿವರಿಸಿದ್ದಳು. ಜ್ಯೋತಿ ಮಲ್ಹೋತ್ರಾ ಚೀನಾಗೆ ಭೇಟಿ ನೀಡಲು ತೆರಳಿದ್ದ ವೇಳೆ ಭದ್ರತಾ ಸಂಸ್ಥೆಯ ಗಮನಕ್ಕೆ ಬಂದಿತ್ತು. ಈ ಮೂಲಕ ಆಕೆಯ ಮೇಲೆ ನಿಗಾ ಇಡಲಾಗಿತ್ತು. ಸಧ್ಯ ಜ್ಯೋತಿ ಮಲ್ಹೋತ್ರಾ ಬಂಧನವಾಗಿದ್ದು ತನಿಖೆ ಮುಂದುವರೆದಿದೆ.

ಇದನ್ನು ಓದಿ:

https://infomindz.in/maganobba-tanna-thandeyannu-kondu-viduth-avagada-endu-bimbisalu-yathna/
Prev Post

ಗೆಳತಿಯೊಂದಿಗೆ ಅಕ್ರಮ ಸಂಬಂಧ ಶಂಕೆ: ಪೆಟ್ರೋಲ್ ಸುರಿದು ಸಜೀವ ದಹನ

Next Post

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದ ಮದುವೆಯೊಂದರಲ್ಲಿ ತಾಳಿ ಕಟ್ಟಿದ ಕೇವಲ 20 ನಿಮಿಷಗಳಲ್ಲೇ…

post-bars

Leave a Comment

Related post