Back To Top

 ವನ್ಯಜೀವಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತಿಲ್ಲ: ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ
May 24, 2025

ವನ್ಯಜೀವಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತಿಲ್ಲ: ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ

ಸಾಮಾನ್ಯವಾಗಿ ಪ್ರವಾಸಕ್ಕೆ ಹೋದಾಗ ಅರಣ್ಯ ಪ್ರದೇಶಗಳಲ್ಲಿ ರಸ್ತೆಯ ಮೇಲೆ ಆಗಾಗ ಕಾಡುಪ್ರಾಣಿಗಳು ಕಂಡುಬರುತ್ತವೆ. ಈ ವೇಳೆ ಪ್ರಯಾಣಿಕರು ಅವುಗಳ ಫೋಟೋ ತೆಗೆದುಕೊಳ್ಳುವುದು ಅಥವಾ ಅವುಗಳ ಸಮೀಪ ಹೋಗಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಂತಹ ಅಪಾಯಕಾರಿ ಕೆಲಸಕ್ಕೆ ಮುಂದಾಗುತ್ತಾರೆ.

ಬೆಂಗಳೂರು: ಸಾಮಾನ್ಯವಾಗಿ ಪ್ರವಾಸಕ್ಕೆ ಹೋದಾಗ ಅರಣ್ಯ ಪ್ರದೇಶಗಳಲ್ಲಿ ರಸ್ತೆಯ ಮೇಲೆ ಆಗಾಗ ಕಾಡುಪ್ರಾಣಿಗಳು ಕಂಡುಬರುತ್ತವೆ. ಈ ವೇಳೆ ಪ್ರಯಾಣಿಕರು ಅವುಗಳ ಫೋಟೋ ತೆಗೆದುಕೊಳ್ಳುವುದು ಅಥವಾ ಅವುಗಳ ಸಮೀಪ ಹೋಗಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಂತಹ ಅಪಾಯಕಾರಿ ಕೆಲಸಕ್ಕೆ ಮುಂದಾಗುತ್ತಾರೆ. ಹಾಗಾಗಿ ಇನ್ಮುಂದೆ ವನ್ಯಜೀವಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದು ಅವುಗಳ ಜೊತೆಗೆ ಚೆಲ್ಲಾಟ ಆಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾ ಟಿಯ ನಾಲ್ಕನೇ ತಿರುವಿನಲ್ಲಿ ಗುರುವಾರ ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಅರಣ್ಯ ಮಾರ್ಗದಲ್ಲಿ ಸಂಚರಿಸುವಾಗ ವಾಹನಗಳಿಂದ ಕೆಳಗೆ ಇಳಿಯುವುದು ಅಪರಾಧವಾಗಿದ್ದು, ಆ ವಾಹನದ ನೋಂದಣಿ ಸಂಖ್ಯೆ ಪತ್ತೆ ಮಾಡಿ, ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದ್ದಾರೆ.

ಇದನ್ನು ಓದಿ:

https://infomindz.in/yuvathi-phone-call-innenu-thali-kattuvaga-vadhu-nirakarane/
Prev Post

ತನ್ನ ಪತಿಯನ್ನು ಕೊಲೆ ಮಾಡಿದ ಶಾಲಾ ಪ್ರಾಂಶುಪಾಲೆ: ಹೆಣ ರವಾನಿಸಲು ವಿದ್ಯಾರ್ಥಿಗಳ ನೆರವು

Next Post

ಮೈಸೂರು ಸ್ಯಾಂಡಲ್‌ ಸೋಪ್‌ ರಾಯಭಾರಿ ತಮನ್ನಾಗೆ ಬರೋಬ್ಬರಿ 6.20 ಕೋಟಿ ಸಂಭಾವನೆ: ಕನ್ನಡ…

post-bars

Leave a Comment

Related post