Back To Top

 ಹೆತ್ತವರ ಬದುಕಿಗೆ ಕೊಳ್ಳಿ ಇಟ್ಟ ಮಗಳ ಲವ್ ಸ್ಟೋರಿ: ಅಪ್ಪ, ಅಮ್ಮ,ತಂಗಿ ಸತ್ತರೂ ಮುಖ ನೋಡಲು ಬಾರದ ಮದುಮಗಳು
May 28, 2025

ಹೆತ್ತವರ ಬದುಕಿಗೆ ಕೊಳ್ಳಿ ಇಟ್ಟ ಮಗಳ ಲವ್ ಸ್ಟೋರಿ: ಅಪ್ಪ, ಅಮ್ಮ,ತಂಗಿ ಸತ್ತರೂ ಮುಖ ನೋಡಲು ಬಾರದ ಮದುಮಗಳು

ಮೈಸೂರು: ಮಗಳು ಮನೆ ಬಿಟ್ಟು ಓಡಿ ಹೋಗಿದ್ದಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೈಸೂರಿನ (Mysuru) ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಮೃತ ದುರ್ದೈವಿಗಳು. ಇವರ ಸಾವಿಗೆ ಕಾರಣ ದೊಡ್ಡ ಮಗಳು ಕಾರಣ ಎಂದು ತಿಳಿದುಬಂದಿದೆ, ಮಹದೇವ ಸ್ವಾಮಿ ಅವರ ದೊಡ್ಡ ಮಗಳು ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಆತನನ್ನು ಮದುವೆಯಾಗುವುದಾಗಿ ಆಕೆ ಪಟ್ಟು ಹಿಡಿದಿದ್ದಾಳಂತೆ. ಆದ್ರೆ ಮನೆಯವರಿಗೆ ಈ ಮದುವೆ ಇಷ್ಟವಿರಲಿಲ್ಲವಂತೆ. ಹೀಗಾಗಿ ಅವಳು ಮನೆಬಿಟ್ಟು ಪ್ರೀತಿಸಿದ ಹುಡುಗನ ಜೊತೆ ಓಡಿಹೋಗಿದ್ದಾಳೆ. ಇದರಿಂದ ಮನನೊಂದು ಮೂವರು ಹಗ್ಗಕಟ್ಟಿಕೊಂಡು ಬೂದನೂರು ಕೆರೆಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಈ ಘಟನೆಗೆ ಇಡೀ ಗ್ರಾಮವೇ ಮಮ್ಮಲ ಮರುಗಿದೆ. ಆದ್ರೆ, ಓಡಿ ಹೋದವಳು ಮಾತ್ರ ತನ್ನ ಅಪ್ಪ, ಅಮ್ಮ, ತಂಗಿಯ ಮಾರಿ ನೋಡಲು ಸಹ ಬಂದಿಲ್ಲ.
ಮುಖ ನೋಡಲು ಬರಲೇ ಇಲ್ಲ
ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವನಕೊಂದಿಗೆ ಪ್ರೀತಿಯಲ್ಲಿ ಬಿದ್ದು ಮನೆಬಿಟ್ಟು ಹೋಗಿದ್ದಳು. ಹೀಗಾಗಿ ಮಾನಕ್ಕೆ ಅಂಜಿ ಮೂವರು ಜೀವ ಕಳೆದುಕೊಂಡಿದ್ದಾರೆ. ಹೆಚ್.ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಮಳೆಯ ನಡುವೆಯೇ ಮೂವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮೃತರನ್ನು ನೆನೆದು ಇಡೀ ಗ್ರಾಮಸ್ಥರು ಕಣ್ಣೀರಿಡುತ್ತಿದ್ದಾರೆ. ಅತ್ತ, ಮನೆ ಬಿಟ್ಟು ಹೋಗಿದ್ದ ಮಗಳು ಅಂತ್ಯಕ್ರಿಯೆಗೂ ಬಂದಿಲ್ಲ ಹೀಗಾಗಿ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.
ಡೆತ್ ನೋಟ್ ನಲ್ಲೇನಿದೆ?
ಮಹದೇವಸ್ವಾಮಿ ಕುಟುಂಬ ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ಆಸ್ತಿ, ಹಣ ಅವಳಿಗೆ(ಹಿರಿಯ ಮಗಳು) ಸಿಗಬಾರದು ಅಂತೆಲ್ಲಾ ಕುರುಳು ಕಿತ್ತುಬರುವಂತೆ ಬರೆದಿದ್ದಾರೆ. ನಮ್ಮನ್ನ ಹುಳಬೇಡಿ, ಅಗ್ನಿ ಸ್ಪರ್ಶ ಮಾಡಿ. ನಮ್ಮ ಸಾವಿಗೆ ನಾವೇ ಕಾರಣ. ಬೆಳಗಿನ ಜಾವ 4 ಗಂಟೆಗೆ ನಿದ್ದೆ ಬರಲಾರದೆ ಒದ್ದಾಡಿ ಬರೆದಿದ್ದೇವೆ. ಮಾನಕ್ಕೆ ಅಂಜಿ ಹೀಗೆ ಮಾಡಿಕೊಳ್ಳುತ್ತಿದ್ದೇವೆ. ನನ್ನ ಮಗಳು ನಮಗೆಲ್ಲ ಮೋಸ ಮಾಡಿದಳು. ನಮ್ಮ ಪರಿಸ್ಥಿತಿ ಜಗತ್ತಿನಲ್ಲಿ ಯಾರಿಗೂ ಬರಬಾರದು. ನಮ್ಮ ಆಸ್ತಿ ಒಂದು ರೂಪಾಯಿಯೂ ಅವಳಿಗೆ ಸಿಗಬಾರದು. ಎಲ್ಲಾ ಆಸ್ತಿಯನ್ನ ಚಿಕ್ಕಪ್ಪನಿಗೆ ನೀಡಿ. ಮನೆ, ಸೈಟ್, ಮನೆಯಲ್ಲಿರುವ ಎರಡುವರೆ ಲಕ್ಷ ಹಣ ಯಾವುದು ಅವಳಿಗೆ ಸಿಗಬಾರದು. ಚಿಕ್ಕಪ್ಪನ ಹೆಂಡತಿ ಸೌಮ್ಯಗೂ ಸಿಗಬಾರದು ಎಂದು ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ.

Prev Post

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ

Next Post

ಹೆಂಡತಿಯರನ್ನು ಹತೋಟಿಯಲ್ಲಿಡಲು ಹುಲಿಯ ಉಗುರು, ಹಲ್ಲು ಕತ್ತರಿಸಿದ ಗಂಡ ಮಹಾಶಯರು

post-bars

Leave a Comment

Related post