Back To Top

 ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ
May 28, 2025

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮುಂದಿನ ಮೂರು ದಿನಕ್ಕೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್, ಮೈಸೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.ಮುಂಗಾರು ಮಳೆ ಪದಾರ್ಪಣೆಯಾಗಿ ಒಂದೇ ದಿನಕ್ಕೆ ಕರಾವಳಿ, ಮಲೆನಾಡು ಸೇರಿ ಒಳನಾಡಿನ ವಿವಿಧ ಜಿಲ್ಲೆಗಳನ್ನು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಸೇರಿ ಮೊದಲಾದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಮುಂಗಾರು ಮಾರುತಗಳು ಪ್ರಬಲವಾಗಿರುವುದರಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.

Prev Post

ದೇಶಾದ್ಯಂತ ಹೆಚ್ಚಿದ ಕೋವಿಡ್ ಪ್ರಕರಣ: ಒಟ್ಟು 1009 ಪ್ರಕರಣಗಳು ವರದಿ

Next Post

ಹೆತ್ತವರ ಬದುಕಿಗೆ ಕೊಳ್ಳಿ ಇಟ್ಟ ಮಗಳ ಲವ್ ಸ್ಟೋರಿ: ಅಪ್ಪ, ಅಮ್ಮ,ತಂಗಿ ಸತ್ತರೂ…

post-bars

Leave a Comment

Related post