Back To Top

 ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ ಬೀಳುತ್ತೆ 1000 ರೂ. ದಂಡ
June 1, 2025

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ ಬೀಳುತ್ತೆ 1000 ರೂ. ದಂಡ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು, ತಂಬಾಕು, ಗುಟ್ಕಾ ಉಗುಳಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು.ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ವಿತರಣೆ ವಿನಿಮಯ -ಕರ್ನಾಟಕ(ತಿದ್ದುಪಡಿ) ಮಸೂದೆ 2024ಕ್ಕೆ ಮೇ 23 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.
ಶುಕ್ರವಾರ ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ ಕಾಯ್ದೆ ಜಾರಿಗೆ ತರಲಾಗಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರೆಗೆ ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘಿಸುವವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.
ಅದೇ ರೀತಿ ಬಾರ್, ರೆಸ್ಟೋರೆಂಟ್, ಪಬ್, ಉಪಹಾರ ಗೃಹಗಳಲ್ಲಿ ಹುಕ್ಕಾ ಸೇವನೆಗೆ ಅವಕಾಶ ನಿಷೇಧಿಸಲಾಗಿದೆ. ಉಲ್ಲಂಘಿಸಿದವರಿಗೆ 50 ಸಾವಿರದಿಂದ ಒಂದು ಲಕ್ಷ ರೂಪಾಯಿವರೆಗೆ ದಂಡ, ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು.

ಇದನ್ನು ಓದಿ:

https://infomindz.in/hendathiyarannu-hathotiyallidalu-huliya-uguru-halu-katharisi-ganda-mahasayaru/
Prev Post

ಅನರ್ಹ ಪಡಿತರ ಚೀಟಿದಾರರಿಗೆ ಸಿಎಂ ಶಾಕ್: ಚೀಟಿಗಳನ್ನು ರದ್ದುಗೊಳಿಸುವಂತೆ ಖಡಕ್ ಸೂಚನೆ

Next Post

ಸಲೂನ್‌ಗೆ ನುಗ್ಗಿ ಲೇಡಿ ಡಾನ್ ತಂಡದಿಂದ ದಾಂಧಲೆ: ಚಿತ್ರಹಿಂಸೆ ಆರೋಪ

post-bars

Leave a Comment

Related post