Back To Top

 ನಟ ಕಮಲ್ ಹಾಸನ್ ಪರ ಮಾತನಾಡಿದವರೆಲ್ಲ ನಾಡ ದ್ರೋಹಿಗಳೆಂದ ಮುಖ್ಯಮಂತ್ರಿ ಚಂದ್ರು

ನಟ ಕಮಲ್ ಹಾಸನ್ ಪರ ಮಾತನಾಡಿದವರೆಲ್ಲ ನಾಡ ದ್ರೋಹಿಗಳೆಂದ ಮುಖ್ಯಮಂತ್ರಿ ಚಂದ್ರು

ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರವಾಗಿ, ನಟ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಪರವಾಗಿ ಮಾತನಾಡಿದ್ದಾರೆ ಎಂದು ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು, ಶಿವರಾಜ್ ಕುಮಾರ್ ಅಷ್ಟೇ ಅಲ್ಲದೆ ಕಮಲ್ ಹಾಸನ್ ಪರವಾಗಿ ಯಾರ್ಯಾರು ಮಾತನಾಡಿದ್ದಾರೋ ಅವರೆಲ್ಲರೂ ನಾಡ ದ್ರೋಹಿ ಎಂದು ಆಕ್ರೋಶ ಹೊರ ಹಾಕಿದರು.

ಬೆಂಗಳೂರು: ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರವಾಗಿ, ನಟ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಪರವಾಗಿ ಮಾತನಾಡಿದ್ದಾರೆ ಎಂದು ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು, ಶಿವರಾಜ್ ಕುಮಾರ್ ಅಷ್ಟೇ ಅಲ್ಲದೆ ಕಮಲ್ ಹಾಸನ್ ಪರವಾಗಿ ಯಾರ್ಯಾರು ಮಾತನಾಡಿದ್ದಾರೋ ಅವರೆಲ್ಲರೂ ನಾಡ ದ್ರೋಹಿ ಎಂದು ಆಕ್ರೋಶ ಹೊರ ಹಾಕಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕಮಲ್ ಹಾಸನ್ ಒಬ್ಬ ಅಯೋಗ್ಯ, ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದ ದುರಹಂಕಾರಿ.ಅವ್ನು ಹೇಳಿದ ಹೇಳಿಕೆ ನಮ್ಮ ನಾಡಿಗೆ ಅವಮಾನ ಆಗಿದೆ. ಆ ಘಟನೆಗೆ ಸಾಕ್ಷಿಯಾಗಿದ್ದ ಶಿವರಾಜ್ ಕುಮಾರ್ ಪಲಾಯನವಾದ ಮಾಡಿ ಬಿಟ್ಟರು. ಕಮಲ್ ಹಾಸನ್ ಅವ್ರ ಹೇಳಿಕೆಯನ್ನ ಖಂಡಿಸಬೇಕಿತ್ತು. ನಾನು, ನನ್ನ ಕುಟುಂಬ ನಿಮಗೆ ಧನ್ಯವಾದ ಹೇಳ್ತೀವಿ ಆದ್ರೆ ನಾಡು, ನುಡಿ ವಿಚಾರದಲ್ಲಿ ಹೋರಾಟದ ಪರವಾಗಿ ಇರ್ತೀನಿ ಅಂತ ಹೇಳಬೇಕಿತ್ತು. ಬೆಂಗಳೂರಿಗೆ ಬಂದಾಗ ಕೇಳಬಹುದಿತ್ತಲ್ಲ ಅಂತ ಹೇಳ್ತಾರೆ. ಹಾಗಿದ್ರೆ ಕನ್ನಡ ವಿಚಾರಕ್ಕೆ ಬಂದಾಗ ನೀವೇನು ಮಾಡ್ತಿದ್ರಿ? ನನಗೆ ಅರ್ಥವೇ ಆಗಲಿಲ್ಲ ಅನ್ನೋದು ಬೇಜವಾಬ್ದಾರಿ ತನ ಎಂದರಲ್ಲದೇ ಶಿವಣ್ಣ ರೀತಿಯಲ್ಲಿ ಇನ್ನೂ ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಅಂತ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ:

https://infomindz.in/nalvadi-krishnaraja-odeyar-prathime-mele-eri-kulitu-avamana/
Prev Post

ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ದಂಪತಿ ಕಾಲಿಗೆ ಬಿದ್ದು ಕ್ಷಮೆ

Next Post

ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮತ್ತು ಮುಂಬೈ ಇಂಡಿಯನ್ಸ್ ನ ಹಾರ್ದಿಕ್…

post-bars

Leave a Comment

Related post