ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು
ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್ಐಆರ್ ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಮಂಗಳೂರು: ಸಾಲು ಸಾಲು ಹತ್ಯೆಗಳಿಂದ ಕಡಲತಡಿ ಮಂಗಳೂರು (Mangaluru) ಕಾದ ಕುಲುಮೆಯಂತಾಗಿದೆ. ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಅಬ್ದುಲ್ ರಹಿಮಾನ ಕೊಲೆ ನಡೆದಿದೆ ಎಂಬ ಆರೋಪ ಕೋಮು ಸಾಮರಸ್ಯ ಕದಡುವಂತೆ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ರನ್ನು ಬದಲಿಸಬೇಕು ಅಂತಾ ಸ್ಥಳೀಯ ಕಾಂಗ್ರೆಸ್ ಮುಸ್ಲಿಂ ಮುಖಂಡರು ಪಟ್ಟುಹಿಡಿದಿದ್ದರು. ಬಳಿಕ ಮಂಗಳೂರಿಗೆ ಭೇಟಿ ನೀಡಿದ್ದ ಸಚಿವ, ಪ್ರಚೋದನಕಾರಿ ಭಾಷಣ ಮಾಡುವವರನ್ನು ಮಟ್ಟಹಾಕ್ತೀವಿ ಎಂದಿದ್ದರು. ಇದೆಲ್ಲದರ ಮಧ್ಯೆ ಇದೀಗ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ 15 ಜನ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಬಿಎನ್ಎಸ್ 353(2)ರಡಿ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ.
ಇದನ್ನು ಓದಿ: