ತಮ್ಮ ಸೋಲಿಗೆ ಕಾರಣ ವಿವರಿಸಿದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ 18 ವರ್ಷಗಳ ಕನಸು ಕೊನೆಗೂ ನನಸಾಗಿದೆ. ದೀರ್ಘ ಕಾಯುವಿಕೆಗೆ ತೆರೆಬಿದ್ದಿದೆ. ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಐಪಿಎಲ್ ಟ್ರೋಫಿಗೆ ಮೊದಲ ಬಾರಿಗೆ ಮುತ್ತಿಟ್ಟಿದೆ.
ಅಹಮದಾಬಾದ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ 18 ವರ್ಷಗಳ ಕನಸು ಕೊನೆಗೂ ನನಸಾಗಿದೆ. ದೀರ್ಘ ಕಾಯುವಿಕೆಗೆ ತೆರೆಬಿದ್ದಿದೆ. ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಐಪಿಎಲ್ ಟ್ರೋಫಿಗೆ ಮೊದಲ ಬಾರಿಗೆ ಮುತ್ತಿಟ್ಟಿದೆ. ಈ ಮೂಲಕ ಅಭಿಮಾನಿಗಳ 18 ವರ್ಷಗಳ ಪ್ರಶಸ್ತಿ ಗೆಲುವಿನ ಕನಸು ನನಸಾಗಿದ್ದು, ‘ಈ ಸಲ ಕಪ್ ನಮ್ದೇ’ ಎಂಬ ಘೋಷವಾಕ್ಯ ಕೊನೆಗೂ ನಿಜವಾಗಿದೆ.ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸುದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಐಪಿಎಲ್ ಟ್ರೋಫಿಗೆ ಮುತ್ತಿಟ್ಟರು. ಪಂದ್ಯದ ನಂತರ, ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮಾತನಾಡಿ, ತಮ್ಮ ಸೋಲಿಗೆ ಪ್ರಮುಖ ಕಾರಣ ವಿವರಿಸಿದರು. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸೋಲು ದೊಡ್ಡ ನಿರಾಶೆ ತಂದಿದೆ. ನಾವು ಫೈನಲ್‌ನಲ್ಲಿ ಸೋತಿದ್ದರೂ, ನಮ್ಮ ಹುಡುಗರು ಅವಕಾಶಕ್ಕೆ ತಕ್ಕಂತೆ ಆಡಿದರು. ಈ ಪಂದ್ಯದಲ್ಲಿ ನಾವು ಸೋಲಬಾರದಿತ್ತು ಎಂದರು.
ಮಾತು ಮುಂದುವರಿಸಿದ ಅಯ್ಯರ್, ಕಳೆದ ಪಂದ್ಯದಲ್ಲಿ ನಾವು 200 ರನ್‌ಗಳ ಗುರಿಯನ್ನು ಸುಲಭವಾಗಿ ಸಾಧಿಸಿದ್ದೇವೆ. ಆದರೆ, ಈ ಪಂದ್ಯದಲ್ಲಿ ಆರ್‌ಸಿಬಿ ಬೌಲರ್‌ಗಳು ಅದ್ಭುತ ಬೌಲಿಂಗ್ ಮಾಡಿದರು. ವಿಶೇಷವಾಗಿ ಕೃನಾಲ್ ಪಾಂಡ್ಯ ಅಸಾಧಾರಣ ಪ್ರದರ್ಶನದೊಂದಿಗೆ ಪಂದ್ಯದ ದಿಕ್ಕನ್ನೇ ತಿರುಗಿಸಿದರು. ಅವರು ತಮ್ಮ ಅನುಭವವನ್ನು ಬಳಸಿಕೊಂಡು ಬೌಲಿಂಗ್ ಮಾಡಿದರು. ನಮ್ಮ ತಂಡದ ಅನೇಕ ಹುಡುಗರು ತಮ್ಮ ಮೊದಲ ಸೀಸನ್ ಆಡಿದರು. ಆದಾಗ್ಯೂ, ಅವರು ನಿರ್ಭೀತ ಆಟವನ್ನು ಆಡಿದರು. ಮುಂದಿನ ವರ್ಷ ನಾವು ಪ್ರಶಸ್ತಿಯನ್ನು ಗೆಲ್ಲಲು ಪ್ರಯತ್ನಿಸುತ್ತೇವೆ ಎಂದು ಶ್ರೇಯಸ್ ಅಯ್ಯರ್ ಹೇಳಿದರು.
ಅಂದಹಾಗೆ, ಅಂತಿಮ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ರನ್ ಗಳಿಸುವಲ್ಲಿ ವಿಫಲರಾದರು. ಕೇವಲ ಒಂದು ರನ್ ಗಳಿಸಿ ರೊಮ್ಯಾರಿಯೋ ಶೆಫರ್ಡ್ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ, ಶಶಾಂಕ್ ಸಿಂಗ್ (30 ಎಸೆತಗಳಲ್ಲಿ 61 ನಾಟೌಟ್) ಅರ್ಧಶತಕ ಗಳಿಸಿ, ಅಜೇಯರಾಗಿ ಉಳಿದರೂ ಯಾವುದೇ ಫಲಿತಾಂಶ ಬರಲಿಲ್ಲ. ಏಕಾಂಗಿ ಹೋರಾಟ ವ್ಯರ್ಥವಾಯಿತು. ಜೋಶ್ ಇಂಗ್ಲಿಸ್ 23 ಎಸೆತಗಳಲ್ಲಿ 39 ರನ್ ಗಳಿಸಿದರು. ಪ್ರಭ್ ಸಿಮ್ರಾನ್ ಸಿಂಗ್ 22 ಎಸೆತಗಳಲ್ಲಿ 26 ರನ್ ಗಳಿಸಿದರು. ಮತ್ತೊಂದೆಡೆ, ಆರ್‌ಸಿಬಿ ಬೌಲರ್‌ಗಳಾದ ಕೃನಾಲ್ ಪಾಂಡ್ಯ 4 ಓವರ್ ಬೌಲಿಂಗ್ ಮಾಡಿ ಕೇವಲ 17 ರನ್ ನೀಡಿ ಎರಡು ನಿರ್ಣಾಯಕ ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್ ಎರಡು ವಿಕೆಟ್ ಪಡೆದರು, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್ ಮತ್ತು ರೊಮಾರಿಯೊ ಶೆಫರ್ಡ್ ತಲಾ ಒಂದು ವಿಕೆಟ್ ಪಡೆದರು.
ಇದನ್ನು ಓದಿ: