Back To Top

 ಆರ್ ಸಿಬಿ ಚೊಚ್ಚಲ ಐಪಿಎಲ್ ಕಿರೀಟ: ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಚೊಚ್ಚಲ ಐಪಿಎಲ್ ಕಿರೀಟ: ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿದ ಆರ್ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ.

ಬೆಂಗಳೂರು : ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿದ ಆರ್ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಆರ್ಸಿಬಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ರಾಜಕೀಯ ನಾಯಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ” Rrrrrrrrr…. Cccccccc…. Bbbbbbbbb….ಇದು ಇತಿಹಾಸ ಸೃಷ್ಟಿಸಿದ ದಿನ.. ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.

‘ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ’ ಎಂದಿದ್ದಾರೆ.

ಇದನ್ನು ಓದಿ:

https://infomindz.in/kalladka-prabakar-bhat-mele-sere-15-mandige-fir/
Prev Post

ಆರ್.ಸಿ.ಬಿ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

Next Post

ತಮ್ಮ ಸೋಲಿಗೆ ಕಾರಣ ವಿವರಿಸಿದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್

post-bars

Leave a Comment

Related post