Back To Top

 ಆರ್.ಸಿ.ಬಿ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು
June 4, 2025

ಆರ್.ಸಿ.ಬಿ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

ಐಪಿಎಲ್ ಫೈನಲ್ ನಲ್ಲಿ ಆರ್.ಸಿ.ಬಿ. ಗೆದ್ದ ಬಳಿಕ ಸಂಭ್ರಮಾಚರಣೆ ನಡೆಸುವಾಗ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದು, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ.

ಬೆಂಗಳೂರು: ಐಪಿಎಲ್ ಫೈನಲ್ ನಲ್ಲಿ ಆರ್.ಸಿ.ಬಿ. ಗೆದ್ದ ಬಳಿಕ ಸಂಭ್ರಮಾಚರಣೆ ನಡೆಸುವಾಗ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದು, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ.

ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಸಂಭ್ರಮಾಚರಣೆ ಮಾಡುತ್ತಾ ಬಾರ್ ಗೆ ತೆರಳುವಾಗ ಯುವಕನಿಗೆ ಚಾಕು ಇರಿದಿದ್ದಾರೆ.ಪ್ರತಿರೋಧ ತೋರುತ್ತಿದ್ದಂತೆ ಯುವಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Prev Post

ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಇಲ್ಲವೆಂದ ಗೃಹಸಚಿವ

Next Post

ಆರ್ ಸಿಬಿ ಚೊಚ್ಚಲ ಐಪಿಎಲ್ ಕಿರೀಟ: ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

post-bars

Leave a Comment

Related post